• 8 ಸೆಪ್ಟೆಂಬರ್ 2024

ಮಂಗಳೂರು:ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

Digiqole Ad

ಮಂಗಳೂರು:ನೂತನ ಪೊಲೀಸ್ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅಧಿಕಾರ ಸ್ವೀಕಾರ

ನೂತನ ಪೊಲೀಸ್‌ ಆಯುಕ್ತರಾಗಿ ಅನುಪಮ್ ಅಗರ್ವಾಲ್‌ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಅಧಿಕಾರ ಹಸ್ತಾಂತರಿಸಿದರು.

ನೂತನ ಆಯುಕ್ತರಾಗಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಿ ಸರಕಾರ ಆದೇಶ ಮಾಡಿತ್ತು. ಅದರಂತೆ ಅವರು ಇಂದು ಅಧಿಕಾರ ವಹಿಸಿಕೊಂಡಿದ್ದಾರೆ. ನೂತನ ಆಯುಕ್ತರಾಗಿ ನೇಮಕ ಗೊಂಡ ಅಗರ್‌ವಾಲ್ ಅವರು ರಾಜಸ್ಥಾನದ ಜೋಧ್‌ಪುರದವರು. ಈ ಹಿಂದೆ ಕರ್ನಾಟಕ ಪೊಲೀಸ್ ಅಕಾಡೆಮಿಯ ನಿರ್ದೇಶಕರಾಗಿ, ದಾವಣಗೆರೆಯಲ್ಲಿ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿಯಾಗಿ, ಬೆಳಗಾವಿಯಲ್ಲಿ ಉಪಪೊಲೀಸ್ ಆಯುಕ್ತರಾಗಿ ರಾಮನಗರ ಮತ್ತು ವಿಜಯಪುರದಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

ವರ್ಗಾವಣೆಗೊಂಡ ಕುಲದೀಪ್ ಕುಮಾರ್ ಆರ್. ಜೈನ್ ಅವರಿಗೆ ಸದ್ಯ ಯಾವುದೇ ಸ್ಥಳ ನಿಗದಿಪಡಿಸಿಲ್ಲ .

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ