ಮಸೂದ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು
ಮಸೂದ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು
ಮಸೂದ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಟ್ಟು ಎಂಟು ಜನರನ್ನು ಬಂಧಿಸಲಾಗಿತ್ತು, ಇತ್ತೀಚಿಗೆ ಅಷ್ಟೇ ನಾಲ್ಕನೇ ಆರೋಪಿ ಶಿವಪ್ರಸಾದ್, ಏಳನೇ ಆರೋಪಿ ಜಿಮ್ ರಂಜಿತ್,ಎಂಟನೇ ಆರೋಪಿ ಭಾಸ್ಕರ್ ಅವರು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿತ್ತು.
ಮಸೂದ್ ಕೂಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳ ಪೈಕಿ ಇದೀಗ ಮತ್ತೆ ಮೂವರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.ಇದೀಗ ನ್ಯಾಯಾಂಗ ಬಂಧನದಲ್ಲಿದ್ದ ಮೂರನೇ ಆರೋಪಿ ಸುಧೀರ್, ಐದನೇ ಆರೋಪಿ ರಂಜಿತ್ ಬಿ ಹಾಗೂ ಆರನೇ ಆರೋಪಿ ಸದಾಶಿವ ಪೂಜಾರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣ ಸಂಬಂಧಪಟ್ಟಂತೆ ಎಂಟು ಜನರ ಪೈಕಿ ಆರು ಜನರಿಗೆ ಜಾಮೀನು ದೊರೆತಂತಾಗಿದೆ.