• 8 ಸೆಪ್ಟೆಂಬರ್ 2024

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 45 ಮಂದಿಗೆ ಗಾಯ

Digiqole Ad

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಇಬ್ಬರು ಸಾವು, 45 ಮಂದಿಗೆ ಗಾಯ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದಿದ್ದು, ತೆಂಗನೌಪಾಲ್ ಜಿಲ್ಲೆಯ ಪಲ್ಲೆಲ್’ನಲ್ಲಿ ಶುಕ್ರವಾರ ನಡೆದ ಎರಡು ಪ್ರತ್ಯೇಕ ಗುಂಡಿನ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಸುಮಾರು 45 ಜನ ಗಾಯಗೊಂಡಿದ್ದಾರೆ ಮತ್ತು ಗುಂಡಿನ ಸುದ್ದಿ ಹರಡುತ್ತಿದ್ದಂತೆ, ತೌಬಲ್ ಮತ್ತು ಕಾಕ್ಸಿಂಗ್ ಜಿಲ್ಲೆಗಳ ವಿವಿಧ ಕಡೆಗಳಿಂದ ಹೆಚ್ಚಿನ ಸಂಖ್ಯೆಯ ಜನ ಪಲ್ಲೆಲ್‌ಗೆ ಧಾವಿಸಿದರು.ಆದರೆ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಅವರನ್ನು ತಡೆದರು, ಇದರಿಂದಾಗಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಲ್ಲೆಲ್’ನಲ್ಲಿ ಅಪರಿಚಿತ ಶಸ್ತ್ರಧಾರಿಗಳ ಎರಡು ಗುಂಪುಗಳ ನಡುವಿನ ಗುಂಡಿನ ಚಕಮಕಿಯಲ್ಲಿ 48 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.

ಇಂಫಾಲ್’ನ ಪ್ರಾದೇಶಿಕ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಾಗಿರುವ ಗಾಯಾಳುಗಳಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ