ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ: ಶೀಘ್ರದಲ್ಲೇ ಸರ್ಕಾರದಿಂದ ಅಧಿಸೂಚನೆ
ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ: ಶೀಘ್ರದಲ್ಲೇ ಸರ್ಕಾರದಿಂದ ಅಧಿಸೂಚನೆ
ಕರ್ನಾಟಕ ಸರ್ಕಾರವು ಬ್ಯಾಂಕ್ ಉದ್ಯೋಗಿಗಳು ಗ್ರಾಹಕರೊಂದಿಗೆ ರಾಜ್ಯದ ಅಧಿಕೃತ ಭಾಷೆಯಾದ ಕನ್ನಡದಲ್ಲಿ ಮಾತ್ರ ವ್ಯವಹರಿಸುವುದನ್ನು ಕಡ್ಡಾಯಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿದೆ.
ರಾಜ್ಯ ಸರ್ಕಾರ, ಸ್ಥಳೀಯ ಸಂಸ್ಥೆಗಳು, ಮಂಡಳಿಗಳು, ನಿಗಮಗಳು ಮತ್ತು ಶಾಸನಬದ್ಧ ಅಥವಾ ಶಾಸನಬದ್ಧವಲ್ಲದ ಸಂಸ್ಥೆಗಳಲ್ಲಿನ ಉದ್ಯೋಗಗಳಿಗೆ ಕನ್ನಡ ಭಾಷೆಯ ಜ್ಞಾನವು ಅತ್ಯಗತ್ಯ,ಎಂದು ಸಾರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಮಸೂದೆ- 2022ನ್ನು ಮಾರ್ಚ್ ನಲ್ಲಿ ಅಂಗೀಕರಿಸಲಾಗಿದ್ದು ಎಲ್ಲಾ ಸರ್ಕಾರಿ ಸಿಬ್ಬಂದಿಗಳ ಕನ್ನಡ ಕಲಿಯುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.ಸ್ಥಳೀಯ ಭಾಷೆ ತಿಳಿದಿಲ್ಲದ ಬ್ಯಾಂಕ್ ಅಧಿಕಾರಿಗಳೊಂದಿಗೆ ವ್ಯವಹರಿಸುವಾಗ ಹಳ್ಳಿಗಳಿಂದ ಬರುವ ಅನೇಕರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಜನರು ಆರೋಪಿಸಿದ್ದಲ್ಲದೆ ಇದು ಬಹುಕಾಲದ ಬೇಡಿಕೆಯಾಗಿತ್ತು.ನೂರಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ ಬ್ಯಾಂಕ್‌ಗಳು ಕನ್ನಡ ಕೋಶ ನೇತೃತ್ವದ ಹಿರಿಯ ಉದ್ಯೋಗಿಗಳ ನೇತೃತ್ವದಲ್ಲಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಭಾಷೆಯ ಬಳಕೆಗಾಗಿ ಕನ್ನಡ ಜ್ಞಾನವನ್ನು ಹೊಂದಿರಬೇಕು ಎಂದು ಮಸೂದೆ ಹೇಳಿದೆ.
ಸ್ಥಳೀಯ ಭಾಷೆ ತಿಳಿದಿಲ್ಲದ ಬ್ಯಾಂಕ್ ಸಿಬ್ಬಂದಿಗಳಳೊಂದಿ ವ್ಯವಹರಿಲಾಗದೆ ಹಳ್ಳಿಯ ಜನರು ಸಮಸ್ಯೆ ಎದುರಿಸುತ್ತಿದ್ದು, ಬ್ಯಾಂಕ್ ಅಧಿಕಾರಿಗಳಿಗೆ ಕನ್ನಡ ಕಡ್ಡಾಯ ಮಾಡಬೇಕು ಎಂಬುದು ಅನೇಕ ಕನ್ನಡಪರ ಹಾಗೂ ಮುಖ್ಯವಾಗಿ ಗ್ರಾಹಕರ ಅಪೇಕ್ಷೆಯಾಗಿತ್ತು.
ಈ ಬೇಡಿಕೆಗೆ ಮನ್ನಣೆ ನೀಡಲು ಹೊರಟಿರುವ ಸರ್ಕಾರ ಅಧಿಸೂಚನೆ ಹೊರಡಿಸಲು ಮುಂದಾಗಿದೆ. ಈ ಕುರಿತು ಇನ್ನೆರಡು ದಿನಗಳಲ್ಲಿ ಕರ್ನಾಟಕ ಸರ್ಕಾರ ಅಧಿಸೂಚನೆ ಹೊರಡಿಸುವ ನಿರೀಕ್ಷೆಯಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಂತೋಷ ಹಂಗಲ್ ಮಾಧ್ಯಮ ಗಳಿಗೆ ತಿಳಿಸಿದ್ದಾರೆ.