• 22 ನವೆಂಬರ್ 2024

ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಸ್ಥೆಗಳು!

Digiqole Ad

ಸೆ.11 ರಂದು ಬೆಂಗಳೂರು ಬಂದ್‌ಗೆ ಕರೆ ನೀಡಿದ ಖಾಸಗಿ ಸಾರಿಗೆ ಸಂಸ್ಥೆಗಳು!

ಸೆ.11 ರಂದು ನಗರದ ಬಂದ್‍ಗೆ ಖಾಸಗಿ ವಾಹನ ಚಾಲಕರ ಒಕ್ಕೂಟ ಸಕಲ ಸಿದ್ಧತೆ ಮಾಡಿಕೊಂಡಿದೆ. ಶಕ್ತಿ ಯೋಜನೆ ವಿರೋಧಿಸಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರದ ವಿರುದ್ಧ ಸಮರ ಸಾರಿದೆ.ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಮೊದಲ ಬಂದ್ ಬಿಸಿ ಮುಟ್ಟಲಿದೆ.

ಮಧ್ಯರಾತ್ರಿ 12 ಗಂಟೆಯಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಖಾಸಗಿ ಸಾರಿಗೆ ಸಂಚಾರ ಬಂದ್ ಆಗಲಿದೆ. ಒಂದಲ್ಲ ಎರಡಲ್ಲ, ಬರೋಬ್ಬರಿ 7 ಲಕ್ಷ ವಾಹನಗಳ ಸಂಚಾರ ಸ್ಥಗಿತಗೊಳ್ಳಲಿದೆ. ನಾಳೆ ಖಾಸಗಿ ಬಸ್, ಓಲಾ ಆಟೋ, ಕ್ಯಾಬ್, ಉಬರ್ ಆಟೋ ಕ್ಯಾಬ್, ಏರ್‌ಪೋರ್ಟ್ ಟ್ಯಾಕ್ಸಿ, ಗೂಡ್ಸ್ ವಾಹನಗಳು, ಶಾಲಾ ವಾಹನಗಳು, ಸಿಟಿ ಟ್ಯಾಕ್ಸಿ ಕಾರ್ಪೋರೇಟ್ ಕಂಪನಿಯ ಬಸ್‌ಗಳು ಬಂದ್ ಆಗಿರಲಿವೆ.

ಬಂದ್‍ನಿಂದ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಬಿಎಂಟಿಸಿ ಮುನ್ನೆಚರಿಕೆ ಕ್ರಮ ಕೈಕೊಂಡಿದೆ. ಕೆಂಪೇಗೌಡ ಏರ್ಪೋರ್ಟ್ ನಿಂದ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಟ್ರಿಪ್ ಮಾಡಲು ಚಾಲಕರಿಗೆ ಸೂಚಿಸಲಾಗಿದೆ. ರವಿವಾರ ಮಧ್ಯರಾತ್ರಿಯಿಂದಲೇ ವಿಮಾನ ನಿಲ್ದಾಣದಿಂದ ಬಿಎಂಟಿಸಿ ವಾಯುವಜ್ರ ಬಸ್‍ಗಳ ಸಂಚಾರ ಆರಂಭವಾಗಲಿದೆ..

ಪ್ರತಿನಿತ್ಯ 500ಕ್ಕೂಅಧಿಕ ಟ್ರಿಪ್‍ಗಳನ್ನ ಬಿಎಂಟಿಸಿ ಓಡಿಸುತ್ತಿದ್ದು, ಬಂದ್ ಇರುವ ಹಿನ್ನೆಲೆ ಹೆಚ್ಚುವರಿಯಾಗಿ 100 ಟ್ರಿಪ್ ಓಡಿಸಲು ಸೂಚಿಸಲಾಗಿದೆʼʼ ಎಂದು ಬಿಎಂಟಿಸಿ ಪ್ರಕಟನೆಯಲ್ಲಿ ತಿಳಿಸಿದೆ.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ