ಮುಂದಿನ 15 ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ!
ಮುಂದಿನ 15 ದಿನ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸಲು ಕರ್ನಾಟಕಕ್ಕೆ CWRC ಸೂಚನೆ!
ರಾಜ್ಯದಲ್ಲಿ ಈಗಾಗಲೇ ಮಳೆ ಕೊರತೆಯಿಂದ ಬರಗಾಲದ ಪರಿಸ್ಥಿತಿ ಎದುರಾಗಿದೆ. ಕನ್ನಡ ನಾಡಿನ ಜೀವನದಿ ಆಗಿರುವ ಕಾವೇರಿ ನದಿಗೆ ನಿರ್ಮಿಸಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಮಟ್ಟ 21 ಸಾವಿರ ಟಿಎಂಸಿಗೆ ಕುಸಿತವಾಗಿದೆ. ಆದರೆ, ಪುನಃ ಕಾವೇರಿ ನೀರು ನಿಯಂತ್ರಣಾ ಸಮಿತಿಯ (ಸಿಡಬ್ಲ್ಯೂಆರ್‌ಸಿ) ಸಭೆಯಲ್ಲಿ ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಸೂಚನೆ ನೀಡಿದೆ.ಈಗಾಗಲೇ ಕಾವೇರಿ ಜಲಾಶಯದಲ್ಲಿ ನೀರಿನ ಸಮಸ್ಯೆ ಎದುರಾಗಿದೆ. ಜೊತೆಗೆ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ಮಂಡ್ಯ, ಚಾಮರಾಜನಗರ ಸೇರಿ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ಮಾಡಿದಾಗ್ಯೂ ಕೂಡ ಸರ್ಕಾರ ತಲಾ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಸಿತ್ತು. ಈಗ ಪುನಃ 15 ದಿನಗಳು ತಲಾ 5 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸೂಚನೆ ನೀಡಿದೆ.
ಕಾವೇರಿ ನೀರು ನಿಯಂತ್ರಣಾ ಸಮಿತಿ(ಸಿಡಬ್ಲ್ಯೂಆರ್‌ಸಿ) ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5,000 ಕ್ಯೂಸೆಕ್ಸ್ ನೀರನ್ನು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ.