ರಾಜ್ಯದ 195 ತಾಲೂಕುಗಳು ಬರ ಪೀಡಿತ: ರಾಜ್ಯ ಸರಕಾರದಿಂದ ಅಧಿಕೃತ ಘೋಷಣೆ
ರಾಜ್ಯದ 195 ತಾಲೂಕುಗಳು ಬರ ಪೀಡಿತ: ರಾಜ್ಯ ಸರಕಾರದಿಂದ ಅಧಿಕೃತ ಘೋಷಣೆ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆಯ ಸಂಪುಟ ಉಪಸಮಿತಿಯ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರ, 195 ಬರ ಪೀಡಿತ ತಾಲ್ಲೂಕುಗಳು ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ. ಅಲ್ಲದೇ ಬರ ತಾಲೂಕುಗಳಲ್ಲಿ ಜಿಲ್ಲಾಧಿಕಾರಿಗಳು ಬರ ನಿರ್ವಹಣೆಯ ಕಾರ್ಯಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತ ತಾಲೂಕುಗಳೆಂದು ಘೋಷಿಸುತ್ತಿದ್ದೇವೆ. ಬರಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದುʼʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತೀವ್ರ ಬರಪೀಡಿತ 161 ತಾಲ್ಲೂಕುಗಳ ಪಟ್ಟಿ
ಬೆಂಗಳೂರು ನಗರ ಜಿಲ್ಲೆ ಬೆಂಗಳೂರು ಪೊರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ, ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾ ಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ.