• 8 ಸೆಪ್ಟೆಂಬರ್ 2024

ಇಂದಿನಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ಓದು’ ಕಡ್ಡಾಯ: ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

 ಇಂದಿನಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ಓದು’ ಕಡ್ಡಾಯ: ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ
Digiqole Ad

ಇಂದಿನಿಂದ ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ‘ಸಂವಿಧಾನ ಪೀಠಿಕೆ ಓದು’ ಕಡ್ಡಾಯ: ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ

ಸೆಪ್ಟೆಂಬರ್ 15 ರಂದು ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದಲ್ಲಿ ವಿಧಾನಸೌಧದ ಮುಂಭಾಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ ಕಾರ್ಯಕ್ರಮ ಉದ್ಘಾಟನೆಯಾಗಿದ್ದು,

ಡಿಸಿಎಂ ಡಿ.ಕೆ. ಶಿವಕುಮಾ‌ರ್, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಇದ್ದರು. ಗ್ರಾಮ ಪಂಚಾಯಿತಿಯಿಂದ ಹಿಡಿದು ಸಚಿವಾಲಯದವರೆಗಿನ ಎಲ್ಲ ಕಚೇರಿಗಳಲ್ಲಿ ಸಂವಿಧಾನ ಪೀಠಿಕೆ ಓದು ನಡೆಯಲಿದೆ.ಸಂವಿಧಾನ ಅಮೃತ ಮಹೋತ್ಸವದ ಅಂಗವಾಗಿ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಜ್ಯ ಎಲ್ಲ ಸರ್ಕಾರಿ ಹಾಗೂ ಖಾಸಗಿ ಪದವಿ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಅಳವಡಿಸಬೇಕೆಂದು ಸೂಚನೆ ನೀಡಲಾಗಿತ್ತು. ಅದರಂತೆ ಸೆಪ್ಟೆಂಬರ್.15ರ ಇಂದಿನಿಂದ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಆರಂಭಗೊಳ್ಳಲಿದೆ.

ಭಾರತ ದೊಡ್ಡ ಪ್ರಜಾಪ್ರಭುತ್ವ ದೇಶವಾಗಿದೆ. ಮೂಲಭೂತ ಕರ್ತವ್ಯಗಳನ್ನು ಯಾರೂ ಪಾಲಿಸುತ್ತಿಲ್ಲ. ಶಾಲಾ-ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮವನ್ನು ಮಕ್ಕಳಲ್ಲಿ ಸಂವಿಧಾನದ ಉದ್ದೇಶ ಅರ್ಥ ಆಗಬೇಕು ಎಂಬ ಹಿನ್ನೆಲೆಯಲ್ಲಿ ಆಂದೋಲನದ ರೀತಿ ಆಯೋಜಿಸಲಾಗುತ್ತಿದೆ.

ರಾಜ್ಯದ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಲ್ಲಿನ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದುವುದು ಹಾಗೂ ಎಲ್ಲರೂ ಸಂವಿಧಾನದ ಪೀಠಿಕೆಗೆ ಬದ್ಧರಾಗುವುದು, ಸಾಂವಿಧಾನಿಕ ತತ್ತ್ವಗಳನ್ನು ತಮ್ಮ ಜೀವನ ಹಾಗೂ ಕರ್ತವ್ಯಗಳಲ್ಲಿ ಅಳವಡಿಸಿಕೊಳ್ಳಲು ಪ್ರತಿಜ್ಞೆಗೈಯುವುದು ಕಡ್ಡಾಯವಾಗಿದೆ ಎಂದು ಸರ್ಕಾರ ಆದೇಶಿಸಿದೆ.

ಸಂವಿಧಾನ ಪೀಠಿಕೆ ಓದುವ ಉದ್ದೇಶ

ಸಂವಿಧಾನವು ಡಾ.ಬಿ.ಆರ್ ಅಂಬೇಡ್ಕರ್ ಅವರು ನಮಗೆ ನೀಡಿರುವ ಜ್ಞಾನ ದೀವಿಗೆ, ಸಮಾನತೆಯ ದೀವಿಗೆಯಾಗಿದೆ. ಹೀಗಾಗಿ ಸಂವಿಧಾನದ ಪೀಠಿಕೆ ಓದು ಬಹಳ ಮಹತ್ವವಾದದ್ದು, ಇದು ವಿದ್ಯಾರ್ಥಿಗಳು ತಮ್ಮ ರಾಷ್ಟ್ರ ನಿರ್ಮಿಸಿರುವ ಮೂಲಭೂತ ತತ್ವಗಳು, ಮೌಲ್ಯಗಳನ್ನು ಅರ್ಥ ಮಾಡಿಕೊಳ್ಳಲು ಸಹಾಯ ಮಾಡುತ್ತದೆ.
ದಿನಾಂಕ:15.09.2023 ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಮುಂಭಾಗದಲ್ಲಿ ಸಿದ್ದರಾಮಯ್ಯ 10,000 ವಿದ್ಯಾರ್ಥಿಗಳ ಜೊತೆ ಭಾರತದ ಸಂವಿಧಾನ ಪೀಠಿಕೆಯನ್ನು ಓದಿದರು. ಈ ಹಿನ್ನೆಲೆ ಏಕಕಾಲದಲ್ಲಿ ಆನ್ ಲೈನ್ (Virtual) ಮೂಲಕ ಸಂವಿಧಾನ ಪೀಠಿಕೆಯನ್ನು ಓದುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.


ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾರತದ ಸಂವಿಧಾನಪೀಠಿಕೆಯನ್ನು ಓದುವ ಕಾರ್ಯಕ್ರಮದಲ್ಲಿ ಎಲ್ಲಾ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸುವ ಕುರಿತು ಅಗತ್ಯ ಕ್ರಮ ವಹಿಸುವಂತೆ ಸೂಚಿಸಲಾಗಿರುತ್ತದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ