• 8 ಸೆಪ್ಟೆಂಬರ್ 2024

ನಿಫಾ ವೈರಸ್ ಭೀತಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

 ನಿಫಾ ವೈರಸ್ ಭೀತಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
Digiqole Ad

ನಿಫಾ ವೈರಸ್ ಭೀತಿ: ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

ಕೇರಳದಲ್ಲಿ 4 ನಿಫಾ ಪ್ರಕರಣಗಳು ದೃಢಪಟ್ಟಿರುವುದರಿಂದ ಹಾಗೂ ಇಬ್ಬರು ನಿಪಾ ವೈರಸ್ ಗೆ ಮೃತಪಟ್ಟಿರುವುದರಿಂದ ಸೋಂಕು ಕರ್ನಾಟಕಕ್ಕೆ ಹರಡದಂತೆ ಎಚ್ಚರ ವಹಿಸಲು ರಾಜ್ಯ ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಕೇರಳದಿಂದ ರಾಜ್ಯಕ್ಕೆ ಬರುವವರ ಮೇಲೆ ನಿಗಾ ಇಡಲಾಗುತ್ತಿದೆ. ಸದ್ಯ ರಾಜ್ಯದಲ್ಲಿ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಯಾರು ನಿಫಾ ಬಗ್ಗೆ ಗಾಬರಿಯಾಗಬೇಡಿ ಎಚ್ಚರಿಕೆ ವಹಿಸಿ ಎಂದು ಆರೋಗ್ಯಧಿಕಾರಿ ಸೂಚನೆ ನೀಡಿದ್ದಾರೆ. ಕೇರಳ ರಾಜ್ಯದಲ್ಲಿ ದಿನೇ ದಿನೇ ನಿಫಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿದೆ.
ಕೇರಳದಲ್ಲಿ ಸೋಂಕು ಪೀಡಿತ ಪ್ರದೇಶಗಳಿಗೆ ಜನರು ಅನಗತ್ಯವಾಗಿ ಪ್ರಯಾಣಿಸದಂತೆ ಸರ್ಕಾರ ಸೂಚಿಸಿದ್ದು, ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, , ಚಾಮರಾಜನಗರ,ಮೈಸೂರು ನಲ್ಲಿ ತೀವ್ರ ಕಟ್ಟೆಚ್ಚರ, ತಪಾಸಣೆ ಹೆಚ್ಚಿಸಲಾಗಿದೆ. ಕರ್ನಾಟಕಕ್ಕೆ ಪ್ರವೇಶಿಸುವ ಕೇರಳದ ಗಡಿಭಾಗಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಅಧಿಸೂಚನೆ ತಿಳಿಸಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೈ ಅಲರ್ಟ್

ಕೇರಳದಲ್ಲಿ ನಿಪಾ ಪ್ರಕರಣಗಳು ದೃಢಪಟ್ಟ ನಂತರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಮಾಡಲಾಗಿದೆ. ಗಡಿಯಲ್ಲಿ ಚೆಕ್ ಪೋಸ್ಟ್ ತೆರೆಯಲು ಆರೋಗ್ಯ ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ವೈರಸ್ ಹರಡುವುದನ್ನು ತಡೆಯಲು ಜಿಲ್ಲಾಡಳಿತವು ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದೆ.

ಮಾರ್ಗಸೂಚಿಗಳು

-ಕೇರಳದ ಸೋಂಕಿತ ಪ್ರದೇಶಕ್ಕೆ ಅನಗತ್ಯ ಪ್ರವಾಸ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
-ಆಸ್ಪತ್ರೆಗಳಲ್ಲಿ ಎಲ್ಲಾ ಔಷಧ ಹಾಗೂ ಆಕ್ಸಿಜನ್ ಇರುವಂತೆ ನೋಡಿಕೊಳ್ಳಬೇಕು
-ಕೇರಳದ ಗಡಿ ಜಿಲ್ಲೆಗಳಾದ ಚಾಮರಾಜನಗರ, ಮೈಸೂರು, ಕೊಡಗು, -ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿಫಾ ವೈರಸ್ ಬಗ್ಗೆ ಕಟ್ಟೆಚ್ಚರ ಹಾಗೂ ಜ್ವರ ಪ್ರಕರಣಗಳ ಕುರಿತು ನಿಗಾ ವಹಿಸುವುದು
-ಶಂಕಿತ ಪ್ರಕರಣ ಇದ್ದರೂ ಸ್ಯಾಂಪಲ್ ಸಂಗ್ರಹಿಸಿ ಎನ್ ಐವಿ ಪುಣೆ ಅಥವಾ ಬೆಂಗಳೂರಿಗೆ ಸಾಗಿಸಲು ಅಗತ್ಯ ಕ್ರಮ ವಹಿಸಬೇಕು
-ನಿಫಾ ಸೋಂಕಿನ ಶಂಕಿತ ಪ್ರಕರಣಗಳ ಕ್ವಾರಂಟೈನ್ ಗಾಗಿ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ 2 ಬೆಡ್ ಗಳನ್ನು ಕಾಯ್ದಿರಿಸುವುದು.
-ನಿಫಾ ವೈರಸ್ ಸೋಂಕಿನ ಕುರಿತು ಜನಜಾಗೃತಿ ಮೂಡಿಸಿಬೇಕು
-ಶಂಕಿತ ಸೋಂಕಿತರನ್ನು ಮೇಲ್ವಿಚಾರಣೆ ಮಾಡಲು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಅನುಸರಿಸುವುದು.
-ಕರ್ನಾಟಕ ಹಾಗೂ ಕೇರಳದ ಗಡಿ ಪ್ರದೇಶದಲ್ಲಿ ಪರಿಶೀಲನೆಗಾಗಿ ಚೆಕ್ ಪೋಸ್ಟ್ ಗಳ ನಿರ್ಮಾಣ ಮಾಡಬೇಕು
-ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಿಬ್ಬಂದಿಗೆ ತರಬೇತಿ ನೀಡುವುದು
ಜಿಲ್ಲೆಗಳಲ್ಲಿ ರ್ಯಾಪಿಡ್ ರೆಸ್ಪಾನ್ಸ್ ತಂಡಗಳನ್ನು ಅಲರ್ಟ್ ಮಾಡುವುದು
-ಸ್ಯಾಂಪಲ್ ಕಲೆಕ್ಷನ್ ಗಾಗಿ ಪಿಪಿಇ ಕಿಟ್, ಹಾಗೂ ಸ್ಯಾಂಪಲ್ ಸಾಗಾಣೆಗಾಗಿ ಇತರೆ ವ್ಯವಸ್ಥೆ ಇರುವುದಂತೆ ನೋಡಿಕೊಳ್ಳುವುದು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ