• 22 ನವೆಂಬರ್ 2024

ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

 ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ
Digiqole Ad

ಸಾಮಾಜಿಕ ಜಾಲತಾಣಗಳ ಬಳಕೆಗೆ ವಯೋಮಿತಿ ನಿಗದಿಪಡಿಸಿ: ಕೇಂದ್ರಕ್ಕೆ ಸರ್ಕಾರಕ್ಕೆ ಹೈಕೋರ್ಟ್​ ಸಲಹೆ

ಆನ್‌ಲೈನ್ ಗೇಮಿಂಗ್‌ಗೆ ವಯೋಮಿತಿ ನಿಗದಿಪಡಿಸಲಾಗಿದೆ. ಇದೇ ಮಾದರಿಯಲ್ಲಿ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ಬಳಕೆಗೆ ವಯೋಮಿತಿ ನಿಗದಿಪಡಿಸಬೇಕು ಎಂದು ನ್ಯಾಯಮೂರ್ತಿ ಜಿ.ನರೇಂದರ್‌ ಅವರ ನೇತೃತ್ವದ ವಿಭಾಗೀಯ ಪೀಠ ಹೇಳಿದೆ.

ಆನ್‌ಲೈನ್ ಗೇಮಿಂಗ್‌ಗೆ ವಯೋಮಿತಿ ನಿಗದಿಪಡಿಸಲಾಗಿದೆ. ಇದೇ ಮಾದರಿ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ಬಳಕೆಗೆ ವಯೋಮಿತಿ ನಿಗದಿಪಡಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಇದಕ್ಕೆ ಉತ್ತರಿಸಿದ ಕೇಂದ್ರ ಸರ್ಕಾರದ ಪರ ವಕೀಲ ಎಂ.ಎನ್. ಕುಮಾರ್, ಕೆಲವು ಆನ್‌ಲೈನ್ ಗೇಮ್ ಆಡಲು ಕಾನೂನಿನ ಪ್ರಕಾರ ಈಗ ಆಧಾರ್ ಮತ್ತು ಇತರ ದಾಖಲೆಗಳನ್ನು ಸಲ್ಲಿಸಬೇಕು ಎಂದು ತಿಳಿಸಿದರು.

ಕೇಂದ್ರ ಸರ್ಕಾರವು 2021ರ ಫೆಬ್ರವರಿ ಮತ್ತು 2022ರ ಅವಧಿಯಲ್ಲಿ ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಮಾಡಿದ್ದ ಆದೇಶಗಳನ್ನು ಪ್ರಶ್ನಿಸಿದ್ದ ಅರ್ಜಿಯೊಂದರ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆದಿತ್ತು. ಈ ಅರ್ಜಿಯನ್ನು ವಜಾ ಮಾಡಿರುವ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ಎಕ್ಸ್ (ಹಿಂದಿನ ಟ್ವಿಟರ್) ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಮಂಗಳವಾರ ನ್ಯಾಯಮೂರ್ತಿಗಳಾದ ಜಿ. ನರೇಂದರ್ ಮತ್ತು ವಿಜಯಕುಮಾರ್‌ ಎ. ಪಾಟೀಲ್ ಅವರ ನೇತೃತ್ವದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ‘ಸಾಮಾಜಿಕ ಮಾಧ್ಯಮ ನಿಷೇಧಿಸುವುದು ಉತ್ತಮ. ಇದರಿಂದ ಸಾಕಷ್ಟು ಒಳ್ಳೆಯದಾಗುತ್ತದೆ. ಈಗ ಶಾಲೆಗೆ ಹೋಗುವ ಮಕ್ಕಳೂ ಅದಕ್ಕೆ ದಾಸರಾಗಿದ್ದಾರೆ. ಕನಿಷ್ಠ ಪಕ್ಷ ಕೇಂದ್ರ ಸರ್ಕಾರ ಸಾಮಾಜಿಕ ಮಾಧ್ಯಮ ಬಳಕೆಗೆ ವಯೋಮಿತಿ ನಿಗದಿಪಡಿಸಬೇಕು’ ಎಂದು ಮೌಖಿಕವಾಗಿ ಹೇಳಿತು.

17 ಅಥವಾ 18 ವಯೋಮಿತಿಯ ಮಕ್ಕಳಿಗೆ ದೇಶದ ಹಿತಾಸಕ್ತಿಗೆ ಪೂರಕ ಯಾವುದು ಮಾರಕ ಯಾವುದು ಎಂಬುದನ್ನು ನಿರ್ಧರಿಸುವ ಪ್ರೌಢಿಮೆ ಇದೆಯೇ?. ಬಳಕೆದಾರರಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಏಕೆಂದರೆ ಆ ವಯಸ್ಸಿನವರಿಗೆ ಮತದಾನದ ಹಕ್ಕು ನೀಡಲಾಗಿದೆ’ ಎಂದು ಪೀಠವು ಮೌಖಿಕವಾಗಿ ಹೇಳಿತು. ಇದೇ ವೇಳೆ ಪೀಠವು ಮಧ್ಯಂತರ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಬುಧವಾರ ಪ್ರಕಟಿಸುವುದಾಗಿ ಹೇಳಿ, ವಿಚಾರಣೆ ಮುಂದೂಡಿತು.

ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 69A ಅಡಿಯಲ್ಲಿ ಫೆಬ್ರವರಿ 2, 2021 ಮತ್ತು ಫೆಬ್ರವರಿ 28, 2022 ರ ನಡುವೆ 1,474 ಖಾತೆಗಳು, 175 ಟ್ವೀಟ್‌ಗಳು, 256 URL ಗಳು ಮತ್ತು ಒಂದು ಹ್ಯಾಶ್‌ಟ್ಯಾಗ್ ಅನ್ನು ನಿರ್ಬಂಧಿಸುವಂತೆ ಸರ್ಕಾರ 10 ಆದೇಶಗಳನ್ನು ಹೊರಡಿಸಿದೆ.

 

 

 

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ