• 8 ಸೆಪ್ಟೆಂಬರ್ 2024

ಕಾವೇರಿ ನೀರು ವಿವಾದ: ತಮಿಳುನಾಡಿಗೆ 15 ದಿನ ನೀರು ಹರಿಸಲು ಆದೇಶಿಸಿದ ಸುಪ್ರೀಂ ಕೋರ್ಟ್

 ಕಾವೇರಿ ನೀರು ವಿವಾದ: ತಮಿಳುನಾಡಿಗೆ 15 ದಿನ ನೀರು ಹರಿಸಲು ಆದೇಶಿಸಿದ ಸುಪ್ರೀಂ ಕೋರ್ಟ್
Digiqole Ad

ಕಾವೇರಿ ನೀರು ವಿವಾದ: ತಮಿಳುನಾಡಿಗೆ 15 ದಿನ ನೀರು ಹರಿಸಲು ಆದೇಶಿಸಿದ ಸುಪ್ರೀಂ ಕೋರ್ಟ್

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಸುಪ್ರೀಂ ಕೋರ್ಟ್‌ ಎತ್ತಿ ಹಿಡಿದಿದ್ದು, ಮುಂದಿನ 15 ದಿನ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿದೆ.

ಸುಪ್ರೀಂ ಕೋರ್ಟ್ ಕರ್ನಾಟಕಕ್ಕೆ ನಿರಾಸೆ ಉಂಟಾಗಿದ್ದು, ತಮಿಳುನಾಡಿಗೆ ಮತ್ತೇ ನೀರು ಹರಿಸುವಂತೆ ಕೋರ್ಟ್ ಸೂಚಿಸಿದೆ. ನೀರು ಹಂಚಿಕೆ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಹೇಳಿದೆ. ಇಂದು ಸುಪ್ರೀಂಕೋರ್ಟ್ ನಲ್ಲಿ ಮಹತ್ವದ ವಿಚಾರಣೆ ನಡೆದಿದ್ದು, ಕರ್ನಾಟಕ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ