ಕಾವೇರಿ ಪ್ರತಿಭಟನೆ: ಮಂಡ್ಯ ಮದ್ದೂರು ಬಂದ್‌ಗೆ ವ್ಯಾಪಕ ಬೆಂಬಲ
ಕಾವೇರಿ ಪ್ರತಿಭಟನೆ: ಮಂಡ್ಯ ಮದ್ದೂರು ಬಂದ್‌ಗೆ ವ್ಯಾಪಕ ಬೆಂಬಲ
ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಇಂದು ಬೆಳಗ್ಗೆ 8 ಗಂಟೆಯಿಂದಲೇ ರೈತರ ಕಾವೇರಿ ಹೋರಾಟ ಆರಂಭವಾಗಲಿದ್ದು, ಮಂಡ್ಯ ನಗರ ಬಂದ್‌ಗೆ ವರ್ತಕರು, ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಬೆಂಬಲ ಸೂಚಿಸಿವೆ.
ತಮಿಳುನಾಡಿಗೆ 5 ಸಾವಿರ ಕ್ಯುಸೆಕ್ ನೀರು ಹರಿಸುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿಹಿಡಿದ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮಂಡ್ಯ ನಗರ ಹಾಗೂ ಮದ್ದೂರು ತಾಲೂಕು ಬಂದ್‌ಗೆ ಕರೆ ನೀಡಿದ ಹಿನ್ನೆಲೆ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.
ಆಟೊ, ಖಾಸಗಿ, ಸಾರಿಗೆ ಸಂಸ್ಥೆ ಬಸ್ ಗಳು ರಸ್ತೆಗೆ ಇಳಿದಿಲ್ಲ. ಶಾಲಾ ಕಾಲೇಜು, ಚಿತ್ರಮಂದಿರಗಳು ಬಂದ್ ಆಗಿವೆ. ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿವೆ. ಈ ಬಂದ್‌ಗೆ ಈಗಾಗಲೇ ರೈತ ಸಂಘ, ಕನ್ನಡಪರ ಸಂಘಟನೆಗಳು ಸೇರಿ ವಿವಿಧ ಸಂಘಟನೆಗಳು ಬಂದ್ ಗೆ ಸಾಥ್ ನೀಡಿದ್ದಾರೆ.