• 15 ಮಾರ್ಚ್ 2025

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್‌ ತಂಡ

 ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್‌ ತಂಡ
Digiqole Ad

ಏಷ್ಯನ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮಹಿಳಾ ಕ್ರಿಕೆಟ್‌ ತಂಡ

ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ವಿಭಾಗದ ಫೈನಲ್ಸ್‌ನಲ್ಲಿ ಭಾರತ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಕಂಡಿದ್ದು ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದೆ  . ಈ ಮೂಲಕ ಭಾರತ ಈ ಬಾರಿಯ ಏಷ್ಯನ್ ಗೇಮ್ಸ್‌ನಲ್ಲಿ ಎರಡನೇ ಚಿನ್ನದ ಪದಕವನ್ನು ಗೆದ್ದುಕೊಂಡಿದೆ .

ಟಾಸ್ ಗೆದ್ದ ಭಾರತ ತಂಡವು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಎರಡು ಹರ್ಮನ್‌ ಪ್ರೀತ್ ಕೌರ್ ಈ ಪಂದ್ಯದಲ್ಲಿ ತಂಡವನ್ನು ಮುನ್ನಡೆಸಿದರು.

ಆರಂಭಿಕ ಬ್ಯಾಟರ್ ಸ್ಮೃತಿ ಮಂದಾನ (46 ರನ್) ಮತ್ತು ಜೆಮಿಮಾ ರಾಡ್ರಿಗಸ್ (42 ರನ್) ಅವರ ಉತ್ತಮ ಬ್ಯಾಟಿಂಗ್ ಬಲದಿಂದ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 116 ರನ್ ಗಳಿಸಿತು.  ಶ್ರೀಲಂಕಾ ತಂಡವು 20 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 97 ರನ್‌ಗೆ ಸೋಲು ಕಂಡಿತ್ತು .

2010ರ ಏಷ್ಯನ್‌ ಗೇಮ್ಸ್‌ ಟೂರ್ನಿಯಲ್ಲಿ ಪಾಕಿಸ್ತಾನ ಚಿನ್ನ ಗೆದ್ದರೆ, ಬಾಂಗ್ಲಾದೇಶ ಬೆಳ್ಳಿ ಹಾಗೂ ಜಪಾನ್‌ ಕಂಚಿನ ಪದಕ ಗೆದ್ದುಕೊಂಡಿತ್ತು. 2014ರಲ್ಲಿ ಪಾಕಿಸ್ತಾನ ಸತತ 2ನೇ ಬಾರಿ ಚಿನ್ನ ಗೆದ್ದರೆ, ಬಾಂಗ್ಲಾದೇಶ ತಂಡ ಬೆಳ್ಳಿ ಹಾಗೂ ಶ್ರೀಲಂಕಾ ತಂಡ ಕಂಚಿನ ಪದಕ ತನ್ನದಾಗಿಸಿಕೊಂಡಿತ್ತು .ಇದೇ ಮೊದಲ ಬಾರಿಗೆ ಏಷ್ಯನ್‌ ಗೇಮ್ಸ್‌ಗೆ ತೆರಳಿದ ಭಾರತ ತಂಡ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದೆ

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ