• 8 ಸೆಪ್ಟೆಂಬರ್ 2024

₹2000 ಮುಖಬೆಲೆಯ ನೋಟುಗಳ ಬದಲಾವಣೆಗೆ ಬಾಕಿ ಉಳಿದಿವೆ ಐದು ದಿನಗಳು!

 ₹2000 ಮುಖಬೆಲೆಯ ನೋಟುಗಳ ಬದಲಾವಣೆಗೆ ಬಾಕಿ ಉಳಿದಿವೆ ಐದು ದಿನಗಳು!
Digiqole Ad

₹2000 ಮುಖಬೆಲೆಯ ನೋಟುಗಳ ಬದಲಾವಣೆಗೆ ಬಾಕಿ ಉಳಿದಿವೆ ಐದು ದಿನಗಳು!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್​ಬಿಐ) ಕಳೆದ ಮೇ 23ರಂದು ಘೋಷಿಸಿರುವಂತೆ ಎರಡು ಸಾವಿರ ಮುಖಬೆಲೆಯ ನೋಟುಗಳ ಬಳಕೆ ಸೆಪ್ಟೆಂಬರ್ 30ಕ್ಕೆ ಕೊನೆಗೊಳ್ಳಲಿದೆ. ಹಾಗಾಗಿ, ನೋಟುಗಳನ್ನು ಬ್ಯಾಂಕ್ ಗೆ ಹಿಂದಿರುಗಿಸಲು ಇನ್ನು ಕೇವಲ ಐದು ದಿನಗಳು ಬಾಕಿಯಿದೆ.

ಸದ್ಯ ಚಲಾವಣೆಯಲ್ಲಿ ಇರುವ ನೋಟುಗಳನ್ನು ಸೆಪ್ಟೆಂಬರ್‌ 30ರ ಒಳಗಾಗಿ ಬ್ಯಾಂಕ್‌ಗಳಲ್ಲಿ ಠೇವಣಿ ಇಡುವಂತೆ ಅಥವಾ ಬೇರೆ ಮುಖಬೆಲೆಯ ನೋಟುಗಳೊಂದಿಗೆ ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಸೂಚನೆ ನೀಡಿದೆ.

₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿದ್ದರಿಂದ ದೇಶದಲ್ಲಿ ಕರೆನ್ಸಿ ಅಗತ್ಯವನ್ನು ಫೂರೈಸುವ ಸಲುವಾಗಿ 2016ರ ನವೆಂಬರ್‌ನಲ್ಲಿ ₹2 ಸಾವಿರ ಮುಖಬೆಲೆಯ ನೋಟನ್ನು ಪರಿಚಯಿಸಲಾಯಿತು. ಇತರ ಮುಖಬೆಲೆಯ ನೋಟುಗಳು ಅಗತ್ಯ ಪ್ರಮಾಣದಲ್ಲಿ ಲಭ್ಯ ಇವೆ. ಹೀಗಾಗಿ, ₹2 ಸಾವಿರ ಮುಖಬೆಲೆಯ ನೋಟುಗಳು ಚಲಾವಣೆಯಲ್ಲಿ ಇರುವ ಅಗತ್ಯ ಇಲ್ಲ ಎಂದು ಆರ್‌ಬಿಐ ತಿಳಿಸಿದೆ.

ಸೆ.30ರವರೆಗೆ ಆರ್ ಬಿಐ ನ 19 ಪ್ರಾದೇಶಿಕ ಕಚೇರಿಗಳು ಮತ್ತು ಸಮೀಪದ ಬ್ಯಾಂಕ್ ಗಳಲ್ಲಿ ಸಾರ್ವಜನಿಕರು ತಮ್ಮಲ್ಲಿರುವ 2 ಸಾವಿರ ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಬಹುದು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ