• 8 ಸೆಪ್ಟೆಂಬರ್ 2024

ಕಾವೇರಿ ಹೋರಾಟ: ನಾಳೆ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

 ಕಾವೇರಿ ಹೋರಾಟ: ನಾಳೆ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ
Digiqole Ad
ಕಾವೇರಿ ಹೋರಾಟ: ನಾಳೆ ಬೆಂಗಳೂರು ಬಂದ್‌ ಹಿನ್ನೆಲೆಯಲ್ಲಿ ಶಾಲೆ-ಕಾಲೇಜಿಗಳಿಗೆ ರಜೆ ಘೋಷಣೆ

ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಕ್ರಮ ವಿರೋಧಿಸಿ ವಿವಿಧ ಸಂಘಟನೆಗಳು ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, 150 ಕ್ಕೂ ಹೆಚ್ಚು ಸಂಘಟನೆಗಳು ಈ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ .ಹಾಗಾಗಿ ಮಕ್ಕಳ ಸುರಕ್ಷತೆ ರಕ್ಷಣೆ ದೃಷ್ಟಿಯಿಂದ ಬೆಂಗಳೂರು ನಗರದ ಎಲ್ಲಾ ಶಾಲೆಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದಯಾನಂದ್ ಆದೇಶ ಹೊರಡಿಸಿದ್ದಾರೆ.ಅದೇ ರೀತಿಯಾಗಿ ಖಾಸಗಿ ಶಾಲೆಗಳ ಒಕ್ಕೂಟದಿಂದ ನಾಳೆ ರಜೆ ನೀಡಲಾಗಿದೆ.

ನಾಳಿನ ಬಂದ್ ಗೆ ಹೋಟೆಲ್ ಮಾಲೀಕರ ಸಂಘಟನೆಗಳು, ಖಾಸಗಿ ವಾಹನ ಚಾಲಕರ ಒಕ್ಕೂಟ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ ಗೆ ಬೆಂಬಲ ವ್ಯಕ್ತಪಡಿಸಿವೆ.

ಸರ್ಕಾರಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಯಾವುದೇ ರಜೆ ಇಲ್ಲ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ-ಕಾಲೇಜು ನಡೆಯಲಿವೆ. ಜೊತೆಗೆ ಕಛೇರಿಗಳ ನಿರ್ವಹಣೆ ಕೂಡ ನಡೆಯಲಿದೆ ಯಾವುದೇ ರಜೆ ಇಲ್ಲ. ಬಂದ್ ಬಿಸಿ ನೊಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು  ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚರಿಕೆಯಾಗಿ ಪೊಲೀಸ್ ಬಂದೋಬಸ್ತ್​ ನಿಯೋಜನೆ ಮಾಡಲಾಗಿದೆ ​ ಎಂದು ಬೆಂಗಳೂರು ಗ್ರಾಮಾಂರ ಡಿಸಿ ಶಿವಶಂಕರ್ ಹೇಳಿದ್ದಾರೆ.

ಬೆಂಗಳೂರು ವಿವಿ ಪರೀಕ್ಷೆ ಮುಂದೂಡಿಕೆ:

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳು‌ ಮುಂದೂಡಿಕೆ ಮಾಡಲಾಗಿದೆ. ಪದವಿಯ 2ನೇ ಹಾಗೂ 4 ನೇ ಸೆಮಿಸ್ಟರ್  ಪರೀಕ್ಷೆಗಳು ಈಗಾಗಲೇ  ನಡೆಯುತ್ತಿದ್ದು, ನಾಳೆ ನಡೆಯಬೇಕಿದ್ದ ಪರೀಕ್ಷೆಗಳನ್ನು ಸೆ.27ರಂದು ನಿಗದಿಗೊಳಿಸಿ ಮುಂದೂಡಿಕೆ ಮಾಡಲಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷಾ ವಿಭಾಗದ ಕುಲಸಚಿವರು ಆದೇಶ ಹೊರಡಿಸಿದ್ದಾರೆ.

Digiqole Ad

NEWS TEAM

ಈ ಸುದ್ದಿಗಳನ್ನೂ ಓದಿ