• 21 ಮೇ 2024

ಅ.1 ರಂದು 1 ಗಂಟೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ : ಶ್ರಮದಾನಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

 ಅ.1 ರಂದು 1 ಗಂಟೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ : ಶ್ರಮದಾನಕ್ಕೆ ಕರೆ ನೀಡಿದ ಪ್ರಧಾನಿ ಮೋದಿ
Digiqole Ad

ಅ.1 ರಂದು 1 ಗಂಟೆ ದೇಶಾದ್ಯಂತ ಸ್ವಚ್ಛತಾ ಅಭಿಯಾನ : ಶ್ರಮದಾನಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

ಅಕ್ಟೋಬರ್ 1 ಭಾನುವಾರದಂದು ದೇಶಾದ್ಯಂತ ಶ್ರಮದಾನ ಮಾಡಲು ಪ್ರಧಾನಿ ಮೋದಿ ಕರೆ ನೀಡಿದ್ದಾರೆ . ಜನರು ಸ್ವಯಂ ಪ್ರೇರಿತರಾಗಿ ದೇಶಾದ್ಯಂತ ಸ್ವಚ್ಛತಾ ಕಾರ್ಯ ಕೈಗೊಳ್ಳಬೇಕು ಅನ್ನೋದು ಪ್ರಧಾನಿ ಮೋದಿ ಅವರ ಆಶಯವಾಗಿದೆ. ಅದರಂತೆ ಅಕ್ಟೋಬರ್ 1 ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆವರೆಗೆ ದೇಶಾದ್ಯಂತ ಜನರು ಸ್ವಯಂ ಪ್ರೇರಿತರಾಗಿ ಸ್ವಚ್ಛತಾ ಅಭಿಯಾನ ನಡೆಸಲು ಕೇಂದ್ರ ಸರ್ಕಾರ ಕರೆ ನೀಡಬಹುದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಅಭಿಯಾನಕ್ಕಾಗಿ ಒಂದು ವೆಬ್ ಪೋರ್ಟಲ್ ಕೂಡಾ ಸಿದ್ಧವಾಗುತ್ತಿದೆ. ದೇಶಾದ್ಯಂತ ಎಲ್ಲ ಜಿಲ್ಲೆಗಳ ಜಿಲ್ಲಾಡಳಿತಗಳು, ಸ್ಥಳೀಯ ಪೌರಾಡಳಿತ ಸಂಸ್ಥೆಗಳೂ ಕೂಡಾ ತಮ್ಮ ಜಿಲ್ಲೆ, ತಮ್ಮ ತಾಲ್ಲೂಕು ಹಾಗೂ ತಮ್ಮ ಮಂಡಲ ವ್ಯಾಪ್ತಿಯಲ್ಲಿ ಕೈಗೊಂಡ ಸ್ವಚ್ಛತಾ ಕಾರ್ಯ, ಸ್ವಚ್ಛಗೊಳಿಸಲಾದ ಪ್ರದೇಶದ ವಿವರ ಸೇರಿದಂತೆ ಎಲ್ಲ ಮಾಹಿತಿಗಳನ್ನೂ ನಮೂದಿಸಬಹುದಾಗಿದೆ. ಪಾರ್ಕ್‌ಗಳು, ನದಿ ತೀರ, ಪ್ರವಾಸಿ ತಾಣ, ಸಾರ್ವಜನಿಕ ಸ್ಥಳ ಸೇರಿದಂತೆ ಜನದಟ್ಟಣೆ ಇರುವ ಪ್ರದೇಶಗಳಲ್ಲಿ ಈ ಸ್ವಚ್ಛತಾ ಅಭಿಯಾನ ನಡೆಯಬೇಕಿದೆ.
ಅಕ್ಟೋಬರ್ 2 ರಂದು ಗಾಂಧಿ ಜಯಂತಿ ಇರುವ ಪ್ರಯುಕ್ತ . ಇದಕ್ಕೂ ಒಂದು ದಿನ ಮುನ್ನ, ಅಂದರೆ ಅಕ್ಟೋಬರ್ 1 ಭಾನುವಾರದಂದು ಈ ಸ್ವಚ್ಛತಾ ಅಭಿಯಾನ ದೇಶದೆಲ್ಲೆಡೆ ನಡೆಯಲಿದೆ.
ಇನ್ನು ಮೊಬೈಲ್ ಸೇರಿದಂತೆ ಯಾವುದೇ ರೀತಿಯ ದೂರವಾಣಿ ಕರೆಗಳನ್ನು ಮಾಡುವಾಗಲೂ ರಿಂಗ್ ಟೋನ್ ಬದಲಿಗೆ ಅಕ್ಟೋಬರ್ 1 ಭಾನುವಾರ ಬೆಳಗ್ಗೆ 10 ರಿಂದ 11 ಗಂಟೆವರೆಗೆ ದೇಶಾದ್ಯಂತ ನಡೆಯಲಿರುವ ಸ್ವಚ್ಛತಾ ಅಭಿಯಾನದ ಕುರಿತಾದ ಮಾಹಿತಿಯನ್ನು ಬಿತ್ತರಿಸಲು ನಿರ್ಧರಿಸಲಾಗಿದೆ. ಈ ಮೂಲಕ, ಈ ಅಭಿಯಾನವನ್ನು ದೇಶಾದ್ಯಂತ ಯಶಸ್ವಿಗೊಳಿಸಲು ತೀರ್ಮಾನಿಸಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ

error: ಕಾಪಿರೈಟು ಗೋಲ್ಡ್ ಫ್ಯಾಕ್ಟರಿಯದ್ದು!!