2023 ರ ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಆಗಿ ಹಂಪಿ ಘೋಷಣೆ
2023 ರ ಭಾರತದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಆಗಿ
ಹಂಪಿ ಘೋಷಣೆ
ರಾಜ್ಯದ ವಿಶ್ವ ಪಾರಂಪರಿಕ ತಾಣವಾದ ವಿಜಯನಗರ ಸಾಮ್ರಾಜ್ಯದ ಹಂಪಿಗೆ ಈಗ ಮತ್ತೊಂದು ಗರಿ ಮೂಡಿದೆ. ಈ ವರ್ಷದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವೆಂದು ಪ್ರವಾಸೋದ್ಯಮ ಸಚಿವಾಲಯವು ಬುಧವಾರ ಘೋಷಣೆ ಮಾಡಿದೆ.ವಿಶ್ವ ಪ್ರವಾಸೋದ್ಯಮ ದಿನಾಚರಣೆಯ ಅಂಗವಾಗಿ ಈ ಘೋಷಣೆ ಮಾಡಲಾಗಿದೆ.31 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಸ್ವೀಕರಿಸಿದ 795 ಅರ್ಜಿಗಳಲ್ಲಿ ಹಂಪಿಯನ್ನು ಆಯ್ಕೆ ಮಾಡಲಾಗಿದೆ.ಇದೊಂದು ಹೆಮ್ಮೆಯ ಕ್ಷಣ ಎಂದು ಕರ್ನಾಟಕ ಪ್ರವಾಸೋದ್ಯಮ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿಗಳು ಬುಧವಾರ ನವದೆಹಲಿಯಲ್ಲಿ ಪ್ರಶಸ್ತಿ ಸ್ವೀಕರಿಸಿದ್ದಾರೆ.
ಅತ್ಯುತ್ತಮ ಪ್ರವಾಸೋದ್ಯಮ ಸ್ಪರ್ಧೆಯ ಒಂಬತ್ತು ಸ್ತಂಭಗಳಲ್ಲಿ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮವಾಗಿ ಹಂಪಿ ಗುರುತಿಸಲ್ಪಟ್ಟಿದೆ ಎಂದು ಸಚಿವಾಲಯ ಪತ್ರದಲ್ಲಿ ತಿಳಿಸಿದೆ.
ಯುನೆಸ್ಕೋ-ರಕ್ಷಿತ ಸೈಟ್, ಸಚಿವಾಲಯದ ಅಡಿಯಲ್ಲಿ ಕೇಂದ್ರೀಯ ನೋಡಲ್ ಏಜೆನ್ಸಿಯಾದ ರೂರಲ್ ಟೂರಿಸಂ ಮತ್ತು ರೂರಲ್ ಹೋಂಸ್ಟೇ ಆಯೋಜಿಸಿದ ಅತ್ಯುತ್ತಮ ಪ್ರವಾಸೋದ್ಯಮ ಗ್ರಾಮ ಸ್ಪರ್ಧೆ-2023ನಲ್ಲಿ ಈ ಘೋಷಣೆ ಮಾಡಲಾಗಿದೆ.
ಈ ಪ್ರಶಸ್ತಿಯು ಗ್ರಾಮೀಣ ಮೂಲಸೌಕರ್ಯ ಮತ್ತು ಸ್ಥಳೀಯ ಸಂಸ್ಕೃತಿಯನ್ನು ಇನ್ನಷ್ಟು ಪ್ರಚುರಪಡಿಸಲು ರಾಜ್ಯ ಸರ್ಕಾರಕ್ಕೆ ಹೆಚ್ಚಿನ ಅನುದಾನ ಪಡೆಯಲು ಸಹಾಯ ಮಾಡುತ್ತದೆ.