• 20 ಮಾರ್ಚ್ 2025

ಕಾಡಾನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

 ಕಾಡಾನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ
Digiqole Ad

ಕಾಡಾನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ಕಡಬದ ಮರ್ದಾಳ ಸಮೀಪ ಕಾಡಾನೆ ತುಳಿತಕ್ಕೊಳಗಾದ ನೇಲ್ಯಡ್ಕ ನಿವಾಸಿ ಚೋಮ ರವರ ಮನೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಇವತ್ತು ಭೇಟಿ ನೀಡಿ ಮನೆಯವರಿಗೆ ಧೈರ್ಯ ತುಂಬಿದರು.

ಆನೆಗಳು ಹಾನಿ ಮಾಡಿದ ಸ್ಥಳವನ್ನು ಪರಿಶೀಲಿಸಿ ಅರಣ್ಯ ಅಧಿಕಾರಿಗಳಿಂದ ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಚಿಕಿತ್ಸೆ ವೆಚ್ಚವನ್ನು ಇಲಾಖೆಯಿಂದಲೇ ಬರಿಸುವಂತೆ ಹಾಗೂ ತಕ್ಷಣ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯವನ್ನು ನೀಡುವುದಾಗಿ ಶಾಸಕಿ ಭರವಸೆ ನೀಡಿದರು.

ಅರಣ್ಯದಂಚಿನ ರಸ್ತೆ ಬದಿಗೆ ಸೋಲಾರ್ ದೀಪ, ರಸ್ತೆ ಬದಿ ಇರುವ ಪೊದೆಗಳನ್ನು ತೆರವುಗೊಳಿಸಬೇಕು ಎಂದು ಶಾಸಕಿ ಭಾಗೀರಥಿ ಮುರುಳ್ಯ ರವರ ಜೊತೆ ಸ್ಥಳೀಯರು ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಲಯ ಅರಣ್ಯಧಿಕಾರಿ ವಿಮಲ್ ಬಾಬು ಆರ್, ಉಪ ವಲಯ ಅರಣ್ಯಧಿಕಾರಿ ಯೋಗೀಶ್ ಜಿ ಸಿ, ಗಸ್ತು ಅರಣ್ಯ ಪಾಲಕರು ಪ್ರಕಾಶ್, ಐತ್ತೂರು ಗ್ರಾಮ ಪಂ ಅಧ್ಯಕ್ಷರಾದ ವತ್ಸಲಾ ಜೆ, ಸದಸ್ಯರಾದ ಉಷಾ, ಪ್ರಮುಖರಾದ ಕೃಷ್ಣ ಶೆಟ್ಟಿ ಕಡಬ, ಮನೋಹರ್ ರೈ, ನಾರಾಯಣ ಶೆಟ್ಟಿ ಅತ್ಯಡ್ಕ, ಹರೀಶ್ ಬಂಟ್ರ, ಗಂಗಾಧರ ರೈ, ತಮ್ಮಯ್ಯ ಗೌಡ, ಕೆ ಟಿ ಪಿಲಿಪ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

 

Digiqole Ad

ಗಣೇಶ್ ಪುತ್ತೂರು

https://goldfactorynews.com

ಈ ಸುದ್ದಿಗಳನ್ನೂ ಓದಿ