ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ
ಸುಳ್ಯ: ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ
ಕೆ.ವಿ.ಜಿ. ಮೆಡಿಕಲ್ ಕಾಲೇಜು ಮತ್ತು ಸಹ ಸಂಸ್ಥೆಗಳಿಂದ ಸುಳ್ಯ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆವರಣದಲ್ಲಿ ಸ್ವಚ್ಚತಾ ಕಾರ್ಯಕ್ರಮ ಇವತ್ತು ನಡೆಯಿತು. ಶಾಸಕಿ ಭಾಗೀರಥಿ ಮುರುಳ್ಯ,ಕಾರ್ಯಕ್ರಮ ಉದ್ಘಾಟಿಸಿ, ಪ್ರಸ್ತಾವಿಕ ಮಾತುಗಳನ್ನಾಡಿದರು.
ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ ಎಂ.ಹೆಚ್. ಸಭಾಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ಸುಳ್ಯ ಪೊಲೀಸ್ ಠಾಣಾ ಸಬ್ ಇನ್ ಸ್ಪೆಕ್ಟರ್ ಈರಯ್ಯ ದೂಂತೂರು, ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ಇ.ಎನ್.ಟಿ. ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಲೋಕೇಶ್, ಕಮ್ಯುನಿಟಿ ಮೆಡಿಸಿನ್ ವಿಭಗಾದ ಮುಖ್ಯಸ್ಥರಾದ ಡಾ. ದಿನೇಶ್, ಸರ್ಜರಿ ವಿಭಾಗದ ಪ್ರೊಫೆಸರ್ ಡಾ. ಬಾಲಕೃಷ್ಣ, ಎಮರ್ಜೆನ್ಸಿ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ. ಲಿವೀಸ್, ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಉಪಸ್ಥಿತರಿದ್ದರು.
ಕೆ.ವಿ.ಜಿ. ಮೆಡಿಕಲ್ ಕಾಲೇಜಿನ ದಿನೇಶ್, ಆರೋಗ್ಯ ಕಾರ್ಯಕರ್ತೆಯರು ಸೇರಿದಂತೆ ಕೆ.ವಿ.ಜಿ. ಮೆಡಿಕಲ್, ನರ್ಸಿಂಗ್, ಫ್ಯಾರಾಮೆಡಿಕಲ್ ಸಿಬ್ಬಂದಿಗಳು, ವಿದ್ಯಾರ್ಥಿಗಳು ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಶ್ರಾವಣ್ಯ ಪ್ರಾರ್ಥಿಸಿ,ತೀರ್ಥೇಶ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.