• 22 ನವೆಂಬರ್ 2024

ವಾಣಿಜ್ಯ ಸಿಲಿಂಡರ್ ದರ 209 ರೂ. ಏರಿಕೆ: ಇಂದಿನಿಂದಲೇ ಜಾರಿ

 ವಾಣಿಜ್ಯ ಸಿಲಿಂಡರ್ ದರ 209 ರೂ. ಏರಿಕೆ: ಇಂದಿನಿಂದಲೇ ಜಾರಿ
Digiqole Ad

ವಾಣಿಜ್ಯ ಸಿಲಿಂಡರ್ ದರ 209 ರೂ. ಏರಿಕೆ: ಇಂದಿನಿಂದಲೇ ಜಾರಿ

 

ಎಲ್‌ಪಿಜಿ ಸಿಲಿಂಡರ್ ದರವನ್ನು ಮತ್ತೆ ಹೆಚ್ಚಿಸಲಾಗಿದೆ. ಇಂದಿನಿಂದಲೇ ಜಾರಿಗೆ ಬರುವಂತೆ 19 ಕೆ.ಜಿಯ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ₹209 ಹೆಚ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ತೈಲ ಕಂಪನಿಗಳು 19 ಕೆಜಿ ವಾಣಿಜ್ಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳ ಬೆಲೆಯನ್ನು 158 ರೂ ಕಡಿತಗೊಳಿಸಿದ ಸುಮಾರು ಒಂದು ತಿಂಗಳ ನಂತರ ಬೆಲೆ ಹೆಚ್ಚಿಸಲಾಗಿದೆ.

ಸರ್ಕಾರವು ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆಗಳನ್ನು 200 ರೂಪಾಯಿಗಳಷ್ಟು ಕಡಿತಗೊಳಿಸಿತ್ತು. ಆದರೆ ಈಗ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ದರವನ್ನು ದಿಢೀರ್‌ 209 ರೂಪಾಯಿನಷ್ಟು ಏರಿಕೆ ಮಾಡಿದೆ.

14.2 ಕೆ.ಜಿಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಈ ಮೂಲಕ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಜುಲೈನಿಂದ ಸತತ ನಾಲ್ಕು ತಿಂಗಳೂ ಹೆಚ್ಚಳ ಮಾಡಿದಂತಾಗಿದೆ.ಇದರಿಂದ ಈಗಾಗಲೇ ದಿನಸಿ ಧಾನ್ಯಗಳ ಬೆಲೆ ಏರಿಕೆಯಿಂದ ಸಂಕಷ್ಟಕ್ಕೀಡಾಗಿರುವ ಹೊಟೇಲ್ ಹಾಗೂ ಇತರ ಆಹಾರೋದ್ಯಮ ನಡೆಸುತ್ತಿರುವವರಿಗೆ ಮತ್ತಷ್ಟು ಸಂಕಟವಾಗಲಿದೆ.

ವಾಣಿಜ್ಯ ಮತ್ತು ಗೃಹಬಳಕೆಯ ಎಲ್ ಪಿಜಿ ಸಿಲಿಂಡರ್‌ ಗಳ ಬೆಲೆಯು ಪ್ರತಿ ತಿಂಗಳ ಮೊದಲ ದಿನದಂದು ಮಾಸಿಕ ಪರಿಷ್ಕರಣೆಗಳಿಗೆ ಒಳಗಾಗುತ್ತದೆ. ಹೀಗಾಗಿ ಬದಲಾದ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಂದಿನಿಂದಲೇ ಜಾರಿಗೆ ಬರಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ