ಎಲ್ಪಿಜಿ ಸಬ್ಸಿಡಿ ಮೊತ್ತ 200 ರೂನಿಂದ 300 ರೂಗೆ ಹೆಚ್ಚಳ
ಎಲ್ಪಿಜಿ ಸಬ್ಸಿಡಿ ಮೊತ್ತ 200 ರೂ ನಿಂದ 300 ರೂಗೆ ಹೆಚ್ಚಳ
ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಸಿಲಿಂಡರ್ ದರದಲ್ಲಿ ಸಿಗುವ ಸಬ್ಸಿಡಿ ಮೊತ್ತವನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ. 200 ರೂನಷ್ಟು ನೀಡಲಾಗುತ್ತಿದ್ದ ಸಬ್ಸಿಡಿಯನ್ನು 300 ರುಪಾಯಿಗೆ ಏರಿಸಲಾಗಿದೆ. ಕೇಂದ್ರ ಸಂಪುಟ ಸಭೆಯಲ್ಲಿ ಇಂದು ತೆಗೆದುಕೊಂಡ ನಿರ್ಧಾರಗಳಲ್ಲಿ ಇದೂ ಒಂದಾಗಿದೆ.
ಪಿಎಂ ಉಜ್ವಲ ಯೋಜನೆ ಹೊಂದಿರುವವರಿಗೆ ಸರ್ಕಾರ ಈ ಹಿಂದೆಯೇ 200 ರೂನಷ್ಟು ಸಬ್ಸಿಡಿ ಕೊಟ್ಟಿದೆ. ಈಗ ಮತ್ತಷ್ಟು 100 ರೂ ಸಬ್ಸಿಡಿ ಒದಗಿಸುತ್ತದೆ. ಅಲ್ಲಿಗೆ ಈ ಯೋಜನೆಯ ಫಲಾನುಭವಿಗಳಿಗೆ ಒಟ್ಟು 300 ರೂ ಸಬ್ಸಿಡಿ ಸಿಗುತ್ತದೆ. ಸಂಪುಟ ಸಭೆಯ ಬಳಿಕ ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಪಿಎಂ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಎಲ್ಪಿಜಿ ಸಬ್ಸಿಡಿ ಏರಿಸಿರುವ ವಿಚಾರವನ್ನು ತಿಳಿಸಿದ್ದಾರೆ.
ಉಚಿತವಾಗಿ ಎಲ್ಪಿಜಿ ಸಂಪರ್ಕದ ಜೊತೆಗೆ ಮೊದಲ ಸಿಲಿಂಡರ್ ಕೂಡ ಉಚಿತವಾಗಿ ಸಿಗುತ್ತದೆ. ಈಗ ಪ್ರತೀ ಸಿಲಿಂಡರ್ಗೆ 300 ರೂನಷ್ಟು ಸಬ್ಸಿಡಿ ಜನರಿಗೆ ಸಿಗುತ್ತದೆ.