• 8 ಸೆಪ್ಟೆಂಬರ್ 2024

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

 ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
Digiqole Ad

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ

ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್‌  ಜಾಮೀನು ನಿರಾಕರಿಸಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್ ಶಾಸ್ತ್ರಿ ನ್ಯಾ ಅನಿಲ್ ಕೆ.ಕಟ್ಟಿ ವಿಭಾಗೀಯ ಪೀಠವು, ಹತ್ಯೆ ಸಂಬಂಧ  ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್ ಶಫಿ, (ಆರೋಪಿ 9), ಕೆ.ಮೊಹಮ್ಮದ್ ಇಟ್ಬಾಲ್ (ಆರೋಪಿ 10) ಹಾಗೂ ಎಂ.ಶಾಹೀದ್ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಎಚ್‌ ಬಿ ಪ್ರಭಾಕರ್‌ ಶಾಸ್ತ್ರಿ ಮತ್ತು ಅನಿಲ್‌ ಕೆ.ಕಟ್ಟಿ ಅವರ ನೇತೃತ್ವದ ವಿಭಾಗೀಯ ಪೀಠವು ತಿರಸ್ಕರಿಸಿದೆ.

ಈ ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿ ಎನ್‌ಐಎ ವಿಶೇಷ ನ್ಯಾಯಾಲಯ 2023ರ ಏಪ್ರಿಲ್ 29ರಂದು ಆದೇಶಿಸಿತು. ಹಾಗಾಗಿ ಹೈಕೋರ್ಟ್ ಮೊರೆ ಹೋಗಿದ್ದರು. ಆರೋಪಿಗಳ ವಿರುದ್ಧದ ಪ್ರಕರಣವು ಎನ್‌ಐಎ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ. ಆರೋಪಿಗಳು ಪ್ರವೀಣ್ ನೆಟ್ಟಾರು ಹತ್ಯೆಯ ಪಿತೂರಿಯಲ್ಲಿ ಭಾಗವಹಿಸಿರುವುದುಸತ್ಯವಾಗಿದ್ದು, ಅದು ಭಯೋತ್ಪಾದಕ ಕೃತ್ಯವನ್ನು ಸಮರ್ಥಿಸುವ, ಪ್ರೋತ್ಸಾಹಿಸುವ ಕೆಲಸವಾಗಿದೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ ಅಡಿ (ಯುಎಪಿಎ) ಆರೋಪಿಗಳು ನಡೆಸಿರುವ ಕೃತ್ಯವು ಶಿಕ್ಷಾರ್ಹ ಅಪರಾಧವಾಗಿದೆ ಎಂದು ತಿಳಿಸಿದ ಪೀಠ,ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ