• 22 ನವೆಂಬರ್ 2024

ಕೆವಿಜಿ ಕಾಲೇಜು ರಾಮಕೃಷ್ಣ ಕೊಲೆ ಪ್ರಕರಣ: ಡಾ.ರೇಣುಕಾ ಪ್ರಸಾದ್ ಸೇರಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

 ಕೆವಿಜಿ ಕಾಲೇಜು ರಾಮಕೃಷ್ಣ ಕೊಲೆ ಪ್ರಕರಣ: ಡಾ.ರೇಣುಕಾ ಪ್ರಸಾದ್ ಸೇರಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್
Digiqole Ad

ಕೆವಿಜಿ ಕಾಲೇಜು ರಾಮಕೃಷ್ಣ ಕೊಲೆ ಪ್ರಕರಣ: ಡಾ.ರೇಣುಕಾ ಪ್ರಸಾದ್ ಸೇರಿ ಐವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

 

ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ಪ್ರೊ.ಎ.ಎಸ್. ರಾಮಕೃಷ್ಣ ಕೊಲೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ರಾಜ್ಯ ಹೈಕೋರ್ಟ್‌ ತೀರ್ಪು ಪ್ರಕಟಿಸಿದ್ದು, 6 ಆರೋಪಿಗಳ ಪೈಕಿ ಒರ್ವರನ್ನು ಹೊರತುಪಡಿಸಿ ಐದು ಮಂದಿ ಆರೋಪಿಗಳಿಗೆ ಹೈಕೋರ್ಟ್‌ ತೀರ್ಪು ಪ್ರಕಟಿಸಿದೆ.

ಸುಳ್ಯ ಕೆವಿಜಿ ಪಾಲಿಟೆಕ್ನಿಕ್ ಪ್ರಾಂಶುಪಾಲರಾಗಿದ್ದ ಪ್ರೊ.ಎ. ಎಸ್ ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ದೋಷಿಗಳಾಗಿರುವ ಕುರುಂಜಿ ವೆಂಕಟರಮಣ ಗೌಡ ಪುತ್ರ ಡಾ.ರೇಣುಕಾ ಪ್ರಸಾದ್ ಸೇರಿ ಆರೋಪಿಗಳ ಪೈಕಿ ಒಬ್ಬರ ಹೊರತುಪಡಿಸಿ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹೈಕೋರ್ಟ್ ತೀರ್ಪು ನೀಡಿದೆ. ರೇಣುಕಾ ಪ್ರಸಾದ್, ಮನೋಜ್ ರೈ,ಹೆ.ಆರ್ ನಾಗೇಶ್, ವಾಮನ್ ಪೂಜಾರಿ, ಭವಾನಿ ಶಂಕರ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಲಾಗಿದೆ. ಹಾಜರಾಗದ ಕಾರಣ ಶರಣ್ ಗೆ ಶಿಕ್ಷೆ ಪ್ರಮಾಣ ಪ್ರಕಟಿಸಿಲ್ಲ. ಡಾ. ರೇಣುಕಾ ಪ್ರಸಾದ್ ಅವರಿಗೆ 10 ಲಕ್ಷ ರೂ. ದಂಡ ವಿಧಿಸಿ, ಅದನ್ನು ಕೊಲೆಗೀಡಾದ ರಾಮಕೃಷ್ಣ ಕುಟುಂಬಕ್ಕೆ ನೀಡುವಂತೆ ಆದೇಶಿಸಲಾಗಿದೆ.

2011ರ ಎಪ್ರಿಲ್ 28ರಂದು ರಾತ್ರಿ 7:45ಕ್ಕೆ ಸುಳ್ಯದ ಅಂಬಟೆಡ್ಕ ಬಳಿಯ ಶ್ರೀ ಕೃಷ್ಣ ಆಯುರ್ವೇದಿಕ್ ಥೆರಪಿ ಕ್ಲಿನಿಕ್ ರಸ್ತೆಯಲ್ಲಿ ತನ್ನ ಪುತ್ರನ ಜೊತೆ ವಾಕಿಂಗ್ ಹೊರಟಿದ್ದ ಪ್ರೊ.ಎ.ಎಸ್.ರಾಮಕೃಷ್ಣ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ತಲವಾರಿನಿಂದ ಕೊಚ್ಚಿ ಕೊಲೆಗೈದಿದ್ದರು. ಘಟನೆಗೆ ಸಂಬಂಧಿಸಿ ಸುಳ್ಯ ಠಾಣೆಯಲ್ಲಿ ಏಳು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. 2016ರ ಅಕ್ಟೋಬರ್ 21ರಂದು ಪ್ರಕರಣದ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು. ಈ ತೀರ್ಪನ್ನು ರಾಜ್ಯ ಸರಕಾರ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿತ್ತು.

ಹೈಕೋರ್ಟ್ ಸೆ.27ರಂದು ಪುತ್ತೂರು ನ್ಯಾಯಾಲಯ ನೀಡಿದ್ದ ತೀರ್ಪನ್ನು ರದ್ದುಗೊಳಿಸಿ ಏಳು ಮಂದಿಯ ಪೈಕಿ ಆರು ಮಂದಿ ದೋಷಿಗಳು ಮತ್ತು ಓರ್ವ ನಿರ್ದೋಷಿ ಎಂದು ಆದೇಶಿಸಿತ್ತು. ಆರೋಪಿ ಆಕಾಶಭವನ ಶರಣ್ ಎಂಬಾತನನ್ನು ಹೊರತುಪಡಿಸಿ ಉಳಿದ ಐವರು ಗುರುವಾರ ಅಪರಾಹ್ನ 2:30ಕ್ಕೆ ಮಂಗಳೂರಿನ ಆರನೇ ಹೆಚ್ಚುವರಿ ಸೆಷನ್ಸ್ ಮತ್ತು ಜಿಲ್ಲಾ ನ್ಯಾಯಾಲಯದಲ್ಲಿ ಹಾಜರಾದರು. ವೀಡಿಯೋ ಕಾನ್ಪರೆನ್ಸ್ ಮೂಲಕ ಅಹವಾಲು ಆಲಿಸಿದ ಹೈಕೋರ್ಟ್ ನ್ಯಾಯಾಧೀಶರು ಐದು ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ