• 8 ಸೆಪ್ಟೆಂಬರ್ 2024

ಏಷ್ಯನ್ ಗೇಮ್ಸ್‌ನಲ್ಲಿ ಜಪಾನ್ ಮಣಿಸಿ ಐತಿಹಾಸಿಕ ಚಿನ್ನ ಗೆದ್ದ ಭಾರತ ಹಾಕಿ ತಂಡ

 ಏಷ್ಯನ್ ಗೇಮ್ಸ್‌ನಲ್ಲಿ ಜಪಾನ್ ಮಣಿಸಿ ಐತಿಹಾಸಿಕ ಚಿನ್ನ ಗೆದ್ದ ಭಾರತ ಹಾಕಿ ತಂಡ
Digiqole Ad

ಏಷ್ಯನ್ ಗೇಮ್ಸ್‌ನಲ್ಲಿ ಜಪಾನ್ ಮಣಿಸಿ ಐತಿಹಾಸಿಕ ಚಿನ್ನ ಗೆದ್ದ ಭಾರತ ಹಾಕಿ ತಂಡ

 ಚೀನಾದ  ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್‌ನಲ್ಲಿ ಭಾರತ ಹಾಕಿ ತಂಡ, ಹಾಲಿ ಚಾಂಪಿಯನ್ ಜಪಾನ್ ತಂಡವನ್ನು 5-1 ಗೋಲುಗಳ ಅಂತರದಿಂದ ಸೋಲಿಸಿ  ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದ್ದೆ.

1958ರಲ್ಲಿ ಭಾರತ ಮೊದಲ ಬಾರಿಗೆ ಏಷ್ಯನ್ ಗೇಮ್ಸ್ ಹಾಕಿಯಲ್ಲಿ ಚಿನ್ನದ ಪದಕ ಗೆದ್ದ ನಂತರ 2014 ರಲ್ಲಿ ಚಿನ್ನಕ್ಕೆ ಮುತ್ತಿಟ್ಟಿತ್ತು. ಇದೀಗ ಭಾರತ 8 ವರ್ಷಗಳ ನಂತರ ಭಾರತದ ಮಡಿಲಿಗೆ ಮತ್ತೆ ಚಿನ್ನದ ಪದಕ ಬಂದು ಒಲಿದಿದೆ. ಈ ಮೂಲಕ ಏಷ್ಯನ್ ಗೇಮ್ಸ್ ಇತಿಹಾಸದಲ್ಲಿ ಭಾರತ ಹಾಕಿ ತಂಡ ನಾಲ್ಕನೇ ಚಿನ್ನವನ್ನು ತನ್ನದಾಗಿಸಿಕೊಂಡಿದೆ. ಹಾಕಿಯಲ್ಲಿ ಭಾರತ ಒಟ್ಟು 15 ಪದಕಗಳನ್ನು ಗೆದ್ದಿದ್ದು, ಇದರಲ್ಲಿ ನಾಲ್ಕು ಚಿನ್ನ, ಒಂಬತ್ತು ಬೆಳ್ಳಿ ಮತ್ತು ಮೂರು ಕಂಚಿನ ಪದಕಗಳು ಸೇರಿವೆ. ಇದು 2023 ರ ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 22 ನೇ ಚಿನ್ನದ ಪದಕವಾಗಿದೆ. ಈ ಗೆಲುವಿನೊಂದಿಗೆ ಭಾರತ ಹಾಕಿ ತಂಡ 2024ರಲ್ಲಿ ನಡೆಯಲ್ಲಿರುವ ಪ್ಯಾರಿಷ್ ಒಲಿಂಪಿಕ್ಸ್‌ಗೆ ಅರ್ಹತೆಯನ್ನು ಪಡೆದುಕೊಂಡಿದೆ.

ಭಾರತ ಈಗಾಗಲೇ 95 ಪದಕಗಳನ್ನು ತನ್ನದಾಗಿಸಿಕೊಂಡಿದೆ. ಭಾರತವು 100 ಪದಕಗಳ ಗಡಿ ದಾಟುವ ನಿರೀಕ್ಷೆ ಇದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ