• 8 ಸೆಪ್ಟೆಂಬರ್ 2024

ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಪತ್ತೆ

 ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಪತ್ತೆ
Digiqole Ad

ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಪತ್ತೆ

ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಬ್ಯಾಂಬೋ ಪಿಟ್ ವೈಫರ್ ಚಿಕ್ಕಮಗಳೂರಿನ ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಬಳಿ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಕಾಣಿಸಿದೆ. ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಕಾಣಸಿಗುವ ಅಳಿವಿನಂಚಿನ ಉರಗ ಇದಾಗಿದ್ದು ಹೆಚ್ಚಾಗಿ ಬಿದಿರಿನ ಬೊಂಬುಗಳಲ್ಲಿ ವಾಸವಿರುವ ಕಾರಣ ಇದಕ್ಕೆ ಬ್ಯಾಂಬೋ ಪಿಟ್ ವೈಫರ್ ಎಂದು ಕರೆಯಲಾಗುತ್ತದೆ. ಈ ಹಾವು ಹೆಚ್ಚು ವಿಷಕಾರಿಯಲ್ಲ, ಆದರೆ ಇದು ಕಡಿದರೆ ಮತ್ತಿನಲ್ಲಿದ್ದು ಜ್ಞಾನ ತಪ್ಪುತ್ತದೆ ಎನ್ನುತ್ತಾರೆ ತಜ್ಞರು. ಉರಗ ತಜ್ಞ ರಿಜ್ವಾನ್ ಹಾವನ್ನು ಸೆರೆ ಹಿಡಿದು ಮರಳಿ ಕಾಡಿಗೆ ಬಿಟ್ಟಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ