• 22 ನವೆಂಬರ್ 2024

ಬಂಡೀಪುರಕ್ಕೆ ಸಫಾರಿಗೆ ತೆರಳುವ ಪ್ರವಾಸಿಗರಿಗೆ 1 ಕೋಟಿ ರೂ. ವಿಮೆ ಜಾರಿ

 ಬಂಡೀಪುರಕ್ಕೆ ಸಫಾರಿಗೆ ತೆರಳುವ ಪ್ರವಾಸಿಗರಿಗೆ 1 ಕೋಟಿ ರೂ. ವಿಮೆ ಜಾರಿ
Digiqole Ad

ಬಂಡೀಪುರಕ್ಕೆ ಸಫಾರಿಗೆ ತೆರಳುವ ಪ್ರವಾಸಿಗರಿಗೆ 1 ಕೋಟಿ ರೂ. ವಿಮೆ ಜಾರಿ

ಬಂಡಿಪುರಕ್ಕೆ ಬರುವ ಪ್ರವಾಸಿಗರಿಗೆ ಇನ್ಶೂರೆನ್ಸ್ ಸೌಲಭ್ಯವನ್ನು ನೀಡಲು ಅರಣ್ಯ ಇಲಾಖೆ ಮುಂದಾಗಿದ್ದು, ಸಫಾರಿಗೆ ಬರುವ ಪ್ರವಾಸಿಗಿಗೆ ಒಂದು ಕೋಟಿ ರೂಪಾಯಿ ಮೌಲ್ಯದ ಇನ್ಶೂರೆನ್ಸ್ ಸೌಲಭ್ಯ ಸಿಗಲಿದೆ.

ಬಂಡೀಪುರಕ್ಕೆ ಆಗಮಿಸುವ ಪ್ರವಾಸಿಗರ ಸುರಕ್ಷತಾ ದೃಷ್ಟಿಯಿಂದ ಅರಣ್ಯ ಇಲಾಖೆಯು ನೂತನ ವಿಮಾ ಯೋಜನೆಯನ್ನು ಆರಂಭಿಸಿದೆ.

ಕಾಡು ಪ್ರಾಣಿಗಳ ದಾಳಿ ಸೇರಿದಂತೆ ಇತರೆ ಯಾವುದೇ ಅವಘಡದ ಸಂದರ್ಭಗಳಲ್ಲಿ ಪ್ರವಾಸಿಗರ ಜೀವ ಹಾನಿಯಾದರೆ ₹1 ಕೋಟಿ ವಿಮಾ ಮೊತ್ತ ಪ್ರವಾಸಿಗರ ಕುಟುಂಬದವರಿಗೆ ಸಿಗಲಿದೆ. ವಿಮೆ ಯೋಜನೆಗೆ ಅರ್ಹರಾಗಲು ಯಾವುದೇ ನೋಂದಣಿ ಅಗತ್ಯವಿಲ್ಲ. ಸಫಾರಿಗೆ ಹೋಗಿರುವ ಟಿಕೆಟ್‌ ಇದ್ದರೆ ಸಾಕು. ಅರಣ್ಯ ಇಲಾಖೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ಶುಲ್ಕ ಇಲ್ಲದೆ ವಿಮೆ ಸುರಕ್ಷತೆ ನೀಡಲು ಮುಂದಾಗಿದೆ.

ಅಪಾಯ ಅಥವಾ ಅಹಿತಕರ ಘಟನೆಗಳು ಅನಿರೀಕ್ಷಿತವಾಗಿರುವ ಹಿನ್ನೆಲೆಯಲ್ಲಿ ಯಾವುದೇ ವಿಮಾ ಮೊತ್ತ ಪಾವತಿಸದೇ ಪ್ರವಾಸಿಗರಿಗಾಗಿ ಕಲ್ಪಿಸಲಾಗಿರುವ ಈ ವಿಮಾ ಯೋಜನೆ ಕುರಿತು ಮೆಚ್ಚುಗೆ ವ್ಯಕ್ತವಾಗಿದೆ. ಬಂಡೀಪುರಕ್ಕೆ ವಾರ್ಷಿಕ ಲಕ್ಷಕ್ಕೂ ಮೀರಿ ಪ್ರವಾಸಿಗರು ಬರುತ್ತಾರೆ. ಇವರಲ್ಲಿ ಹೆಚ್ಚಿನ ಮಂದಿ ಸಫಾರಿಗೆ ತೆರಳುತ್ತಾರೆ. ಇವರಿಗೆ ಅಪಾಯ, ಅವಘಡಗಳ ಸಂದರ್ಭದಲ್ಲಿ ವಿಮಾ ರಕ್ಷಣೆ ಒದಗಿಸುವುದು ಇಲಾಖೆ ಉದ್ದೇಶವಾಗಿದೆ.ಅರಣ್ಯ ಸಂರಕ್ಷಣಾಧಿಕಾರಿ, ಡಾ| ಪಿ, ರಮೇಶ್ ಕುಮಾರ್ ಅವರು ಹೊಸ ವಿಮಾ ಯೋಜನೆಯನ್ನು ಜಾರಿಗೊಳಿಸುವ ಮೂಲಕ ಪುವಾಸಿಗರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

 

 

 

 

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ