ಆನ್‌ಲೈನ್ ನಲ್ಲಿ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ
ಆನ್‌ಲೈನ್ ನಲ್ಲಿ SSLC ಅಂಕಪಟ್ಟಿ ತಿದ್ದುಪಡಿಗೆ ಅವಕಾಶ
ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅನೇಕ ಸೇವೆಗಳನ್ನು ಡಿಜಿಟಲೀಕರಣ ಮಾಡಿದ್ದು ಆನ್‌ಲೈನ್ ನಲ್ಲೇ SSLC ಅಂಕಪಟ್ಟಿ ತಿದ್ದುಪಡಿ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಅಂಕಪಟ್ಟಿಯಲ್ಲಿ ಅಭ್ಯರ್ಥಿಯ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕ ಇತರೆ ತಪ್ಪುಗಳಿದ್ದಲ್ಲಿ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ. ವಿದ್ಯಾರ್ಥಿಯು ಓದಿದ ಶಾಲೆಗಳ ಮುಖ್ಯ ಶಿಕ್ಷಕರಿಗೆ ಪೂರಕ ದಾಖಲೆ ಸಲ್ಲಿಸಬೇಕು. ಮುಖ್ಯ ಶಿಕ್ಷಕರು ಮಂಡಳಿಯ ವೆಬ್ಬೆಟ್ ಮೂಲಕ ಶಾಲಾ ಲಾಗಿನ್ ನಲ್ಲಿ ಪ್ರಸ್ತಾವನೆ ಸಲ್ಲಿಸಬಹುದು. ಮುಂದಿನ ಒಂದು ತಿಂಗಳ ಅವಧಿಗೆ ಮಾತ್ರ ಭೌತಿಕ ಅರ್ಜಿ ಸ್ವೀಕರಿಸಲಿದ್ದು, ನಂತರ ಆನೈನ್ ಮೂಲಕವೇ ಅರ್ಜಿ ಸ್ವೀಕರಿಸಲಾಗುವುದು ಎಂದು ಹೇಳಲಾಗಿದೆ. ಆನ್‌ಲೈನ್ ಮುಖಾಂತರ ಪ್ರಸ್ತಾವನೆಯನ್ನು ಸಲ್ಲಿಸುವ ಸಂದರ್ಭದಲ್ಲಿ ಅಪ್‌ಲೋಡ್ ಮಾಡುವ ದಾಖಲೆಗಳನ್ನು ತಿದ್ದುಪಡಿ/ನಕಲಿ ಮಾಡಿದಲ್ಲಿ ಅಂತಹ ಶಾಲಾ ಮುಖ್ಯೋಪಾಧ್ಯಾಯರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಆನ್‌ಲೈನ್ ಮೂಲಕ ತಿದ್ದುಪಡಿ ಮಾಡುವ ಕುರಿತು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.