• 8 ಸೆಪ್ಟೆಂಬರ್ 2024

ಸುಳ್ಯ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ 

 ಸುಳ್ಯ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ 
Digiqole Ad

ಸುಳ್ಯ: ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆ

ಸುಳ್ಯ ತಾಲೂಕು ಆಡಳಿತ , ತಾಲೂಕು ಪಂಚಾಯತ್ , ನಗರ ಪಂಚಾಯತ್, ಸುಳ್ಯ ಅಂಚೆ ಇಲಾಖೆ , ಸರಕಾರಿ ಪ್ರಥಮ ದರ್ಜೆ ಕಾಲೇಜು ಕೊಡಿಯಾಲಬೈಲು, ಯುವಜನ ಸಂಯುಕ್ತ ಮಂಡಳಿ ಸುಳ್ಯ, ರೋಟರಿ ಕ್ಲಬ್ ಸುಳ್ಯ, ರೋಟರಿ ಸಿಟಿ ಸುಳ್ಯ, ಸುಳ್ಯ ಲಯನ್ಸ್ ಕ್ಲಬ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಸುಳ್ಯ ಇದರ ಸಹಭಾಗಿತ್ವದಲ್ಲಿ  ನನ್ನ ಮಣ್ಣು ನನ್ನ ದೇಶ ಅಮೃತ ಕಲಶ ಯಾತ್ರೆಯ ಮೆರವಣಿಗೆಯು ಸುಳ್ಯದ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡು ತಾಲೂಕು ಪಂಚಾಯತ್ ನಲ್ಲಿ ಸಮಾಪ್ತಿಗೊಂಡಿತು.

ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪಾಲ್ಗೊಂಡು ತಾಲೂಕಿನ 25 ಗ್ರಾಮ ಪಂಚಾಯತ್ ಗಳಿಂದ ಸಂಗ್ರಹಿಸಲಾಗಿದ್ದ ಮಣ್ಣು ತುಂಬಿದ ಕಲಶವನ್ನು ಸುಳ್ಯದಿಂದ ದೆಹಲಿಗೆ ತೆರಳಲಿರುವ ಶ್ರವಣ್ ರಿಗೆ ಹಸ್ತಾಂತರ ಮಾಡಿ, ಶುಭ ಹಾರೈಸಿದರು.

ಸುಳ್ಯ ತಹಶೀಲ್ದಾರ್ ಮಂಜುನಾಥ್, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ್ ಪ್ರತಿಜ್ಞೆ ಬೋಧನೆ ಮಾಡಿದರು. ತಾಲೂಕು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಸ್ವಾಗತಿಸಿ, ಯುವಜನ ಸೇವಾ ಕ್ರೀಢಾಧಿಕಾರಿ ದೇವರಾಜ್ ಮುದ್ಲಾಜೆ ನಿರೂಪಿಸಿದರು.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ