• 18 ಅಕ್ಟೋಬರ್ 2024

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

 ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು
Digiqole Ad

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಸ್ಪತ್ರೆಗೆ ದಾಖಲು

 

 

ಅನಾರೋಗ್ಯದ ಕಾರಣಕ್ಕಾಗಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಆಸ್ಪತ್ರೆಗೆ ದಾಖಲಾಗಿದ್ದು, ಮೊಣಕಾಲು ನೋವು ತೀವ್ರವಾಗಿದ್ದರಿಂದ ವೈದ್ಯರ ಸಲಹೆ ಮೇರೆಗೆ ಮೊಣಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಿಕೊಂಡಿದ್ದಾರೆ . ಸಿಎಂ ಆಗಿದ್ದ ಸಂದರ್ಭದಲ್ಲಿ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಇದೀಗ ಬೆಂಗಳೂರಿನಲ್ಲೇ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಹಲವು ದಿನಗಳ ಕಾಲ ಅವರಿಗೆ ವಿಶ್ರಾಂತಿ ಅಗತ್ಯವಿದೆ. ಹೀಗಾಗಿ ಅವರು ಸದ್ಯಕ್ಕೆ ರಾಜಕೀಯ ಚಟುವಟಿಕೆಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಮಾಜಿ CM ಬಿ.ಎಸ್ ಯಡಿಯೂರಪ್ಪ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ