ಬೆಂಬಲಬೆಲೆ ಯೋಜನೆಯಡಿ ಹಿಂಗಾರು ಬೆಳೆಗಳ ಬೆಲೆ ಹೆಚ್ಚಳ
ಬೆಂಬಲಬೆಲೆ ಯೋಜನೆಯಡಿ ಹಿಂಗಾರು ಬೆಳೆಗಳ ಬೆಲೆ ಹೆಚ್ಚಳ
ಪ್ರಮುಖ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಕೇಂದ್ರ ಸರ್ಕಾರವು ಗೋಧಿಯ ಕನಿಷ್ಠ ಬೆಂಬಲ ಬೆಲೆಯನ್ನು ಕ್ವಿಂಟಲ್‌ಗೆ 150ರೂ. ಹೆಚ್ಚಿಸುವುದಾಗಿ ಇಂದು ಘೋಷಿಸಿದೆ. ಗೋಧಿ ಸೇರಿ ಪ್ರಮುಖ ಆರು ಹಿಂಗಾರು ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ಹೆಚ್ಚಳ ಮಾಡಿದೆ. ಕೇಂದ್ರದಲ್ಲಿ ಮೋದಿ ಸರ್ಕಾರ 2014ರಲ್ಲಿ ಅಧಿಕಾರಕ್ಕೆ ಬಂದ ಬಳಿಕ ಇದು ಗರಿಷ್ಠ ಮಟ್ಟದ ಬೆಂಬಲ ಬೆಲೆ ಹೆಚ್ಚಳವಾಗಿದೆ. ಪ್ರಸ್ತುತ ಗೋಧಿಗೆ ಕನಿಷ್ಠ ಬೆಂಬಲ ಬೆಲೆ 2125ರೂ. ಇದೆ.
ಕೇಂದ್ರ ಸರ್ಕಾರ ನಿಗದಿಪಡಿಸಿರುವ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ರೈತರಿಂದ ಹಿಂಗಾರು ಬೆಳೆಗಳನ್ನು ಖರೀದಿಸಲು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ