• 22 ನವೆಂಬರ್ 2024

ಅಕ್ರಮ ಆಸ್ತಿ ಪ್ರಕರಣ: ಡಿಕೆ ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

 ಅಕ್ರಮ ಆಸ್ತಿ ಪ್ರಕರಣ: ಡಿಕೆ ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ
Digiqole Ad

ಅಕ್ರಮ ಆಸ್ತಿ ಪ್ರಕರಣ: ಡಿಕೆ ಶಿವಕುಮಾರ್ ಸಿಬಿಐ ತನಿಖೆ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಸಿಬಿಐ ವಿಚಾರಣೆ FIR ರದ್ದು ಕೋರಿದ್ದ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಇಂದು ವಜಾ ಮಾಡಿದೆ. ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ಸಹ ಹೈಕೋರ್ಟ್ ತೆರವುಗೊಳಿಸಿದೆ. ಡಿಕೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೆ ನಟರಾಜನ್ ಅವರ ನೇತೃತ್ವದ ಏಕಸದಸ್ಯ ಪೀಠ ನಡೆಸಿದ್ದು, ವಿಚಾರಣೆ ನಡೆಸಿದ ನ್ಯಾಯಾಲಯ ಡಿಕೆಶಿ ವಿರುದ್ಧದ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲು ಅನುಮತಿ ನೀಡಿದ್ದು, ಮೂರು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ವರದಿ ನೀಡುವಂತೆ ಆದೇಶ ಹೊರಡಿಸಿದೆ. ಡಿ ಕೆ ಶಿವಕುಮಾರ್‌ 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂದು ಸಿಬಿಐ, 2020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದು, ಈ ಪ್ರಕರಣವನ್ನು ರದ್ದು ಕೋರಿ ಡಿಕೆ ಶಿವಕುಮಾರ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ತನಿಖೆಗೆ ಮಧ್ಯಂತರ ತಡೆ ತಡೆಯಾಜ್ಞೆ ನೀಡಿತ್ತು.ಇದೀಗ ಸಿಬಿಐ ತನಿಖೆಗೆ ಹೈಕೋರ್ಟ್‌ ಅಸ್ತು ಎಂದಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ