• 8 ಸೆಪ್ಟೆಂಬರ್ 2024

ವಿಧಾನಸೌಧ ದಲ್ಲಿ ‘ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸ್ಪಷ್ಟನೆ

 ವಿಧಾನಸೌಧ ದಲ್ಲಿ ‘ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ  ಸ್ಪಷ್ಟನೆ
Digiqole Ad

ವಿಧಾನಸೌಧ ದಲ್ಲಿ ‘ಅರಿಶಿನ ಕುಂಕುಮ’ ಬಳಸದಂತೆ ಸುತ್ತೋಲೆ : ಸಿಎಂ ಸ್ಪಷ್ಟನೆ

ರಾಜ್ಯ ಸರ್ಕಾರವು ಆಯುಧಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಹೊರಡಿಸಿರುವ ವಿಚಾರ ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ ಅಥವಾ ಬಹುಕಾಲ ಉಳಿಯುತ್ತವೆ. ಇದರಿಂದಾಗುವ ಹಾನಿ ತಪ್ಪಿಸಲು ಹಿಂದಿನ ಸರ್ಕಾರಗಳು ಪಾಲಿಸಿಕೊಂಡು ಬಂದಿದ್ದ ಸಂಪ್ರದಾಯವನ್ನೇ ನಾವೂ ಪಾಲಿಸಿದ್ದೇವೆ ಎಂದು ತಿಳಿಸಿದ್ದಾರೆ. ಈ ಬಗ್ಗೆ ಸರ್ಕಾರದ ವಿರುದ್ಧ ನಡೆಸಲಾಗುತ್ತಿರುವ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮಾಡಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ