• 8 ಸೆಪ್ಟೆಂಬರ್ 2024

ಇಸ್ರೋದ ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

 ಇಸ್ರೋದ ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ
Digiqole Ad

ಇಸ್ರೋದ ಮಾನವಸಹಿತ ಗಗನಯಾನ​ದ ಮೊದಲ ಹಾರಾಟ ಪರೀಕ್ಷೆ ಯಶಸ್ವಿ

ಬೆಳಗ್ಗೆ ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್​ ಧವನ್​​ ಬಾಹ್ಯಾಕಾಶ ಕೇಂದ್ರದಿಂದ ಗಗನಯಾನ ನೌಕೆಯ ಸುರಕ್ಷತಾ ಪ್ರಯೋಗ ವಾಹಕದ ಉಡಾವಣೆ ಯಶಸ್ವಿಯಾಗಿ ನೆರವೇರಿದೆ ಮಾನವಸಹಿತ ಗಗನಯಾನ ಯೋಜನೆಯ ನೌಕೆ ಪ್ರಯೋಗ ಯಶಸ್ವಿಯಾಗಿದೆ. ಈ ಮೂಲಕ ಇಸ್ರೋ ಮತ್ತೊಂದು ಮೈಲಿಗಲ್ಲು ಸಾಧಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ (SDSC) ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​​ ಹೊತ್ತ ಮಾನವರಹಿತ ರಾಕೆಟ್ ಭೂಮಿಯಿಂದ 17 ಕಿ.ಮೀ. ಎತ್ತರಕ್ಕೆ ಹಾರಿ ಬಂಗಾಳ ಕೊಲ್ಲಿ ಸಮುದ್ರದಲ್ಲಿ ಬಿದ್ದಿದೆ. ಈ ಮೂಲಕ ನೌಕೆ ಸೇಫ್ ಲಾಂಡಿಂಗ್ ಮಾಡಿದೆ. ರಾಕೆಟ್​​ನಿಂದ ಬೇರ್ಪಟ್ಟು ಕ್ರ್ಯೂ ಮಾಡೆಲ್ ಮತ್ತು ಕ್ರ್ಯೂ ಎಸ್ಕೇಪ್​ ಮಾಡೆಲ್​ಗಳು ಪ್ಯಾರಚೂಟ್ ಮೂಲಕ ಯಶಸ್ವಿಯಾಗಿ ಭೂಮಿಗೆ ಬಂದಿಳಿದಿವೆ.

ಪರೀಕ್ಷಾ ವಾಹನ DI ಮಿಷನ್ ಅನ್ನು ಬೆಳಿಗ್ಗೆ 8 ಗಂಟೆಗೆ ಮೊದಲ ಉಡಾವಣಾ ಪ್ಯಾಡ್‌ನಿಂದ ಲಿಫ್ಟ್-ಆಫ್ ಮಾಡಲು ನಿಗದಿಪಡಿಸಲಾಗಿತ್ತು. ಕಾರಣಾಂತರಗಳಿಂದ 8.45 ಕ್ಕೆ ಮುಂದೂಡಲಾಯಿತು. ಆದರೆ ಉಡಾವಣೆಗೆ ಕೇವಲ 5 ಸೆಕೆಂಡುಗಳ ಮೊದಲು, ಕೌಂಟ್‌ಡೌನ್ ನಿಲ್ಲಿಸಲಾಯಿತು. ಇದೀಗ 10 ಗಂಟೆಗೆ ಯಶಸ್ವಿಯಾಗಿ ಉಡಾವಣೆ ಮಾಡಲಾಗಿದೆ. ಮೂರು ದಿನಗಳ ಅವಧಿಗೆ ಮಾನವರನ್ನು ಬಾಹ್ಯಾಕಾಶಕ್ಕೆ ಕಳುಹಿಸುವ ಮತ್ತು ಅವರನ್ನು ಸುರಕ್ಷಿತವಾಗಿ ಭೂಮಿಗೆ ಕರೆತರುವ ಗುರಿಯನ್ನು ಗಗನ್‌ಯಾನ್ ಮಿಷನ್ ಹೊಂದಿದೆ.

ಪರೀಕ್ಷೆಯ ಉದ್ದೇಶಗಳೇನು?

ಸುರಕ್ಷತೆಯ ಖಾತ್ರಿ: ವಿವಿಧ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಕ್ರ್ಯೂ ಎಸ್ಕೇಪ್ ಸಿಸ್ಟಮ್ ಸೇರಿದಂತೆ ಎಲ್ಲ ವ್ಯವಸ್ಥೆಗಳು ಉದ್ದೇಶಿತ ರೀತಿಯಲ್ಲಿ ಕಾರ್ಯಾಚರಿಸುತ್ತವೆಯೇ ಅನ್ನೋದು ಖಾತ್ರಿಯಾಗಲಿದೆ.ಇದು ಗಗನಯಾತ್ರಿಗಳ ಸುರಕ್ಷತೆಯನ್ನ ಖಚಿತಪಡಿಸುತ್ತೆ.

ತಂತ್ರಜ್ಞಾನದ ಖಚಿತತೆ : ಪರೀಕ್ಷೆಗಳನ್ನು ನಡೆಸುವ ಮೂಲಕ ಮಾನವ ಸಹಿತ ಗಗನಯಾತ್ರೆ ಕೈಗೊಳ್ಳಲು ಅವಶ್ಯಕವಾದ ಜೀವ ಬೆಂಬಲ ವ್ಯವಸ್ಥೆ ಹಾಗೂ ಬಾಹ್ಯಾಕಾಶ ಕ್ಯಾಪ್ಸೂಲ್ ಸೇರಿದಂತೆ ವಿವಿಧ ಆಧುನಿಕ ತಂತ್ರಜ್ಞಾನಗಳ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಸಾಧ್ಯ.

ಅಪಾಯಗಳನ್ನ ತಗ್ಗಿಸುವುದು : ಸಮರ್ಪಕವಾಗಿ ಪರೀಕ್ಷೆಗಳನ್ನು ಕೈಗೊಳ್ಳುವುದರಿಂದ, ಸಂಭಾವ್ಯ ಸಮಸ್ಯೆಗಳು ಹಾಗೂ ಅಪಾಯಗಳನ್ನು ಗುರುತಿಸಿ, ನೈಜ ಮಾನವ ಸಹಿತ ಯೋಜನಾ ಜಾರಿಗೂ ಮುನ್ನವೇ ಅದನ್ನು ಸರಿಪಡಿಸಲು ಸಾಧ್ಯ ವಾಗುತ್ತದೆ.

 

 

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ