• 8 ಸೆಪ್ಟೆಂಬರ್ 2024

ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್!

 ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್!
Digiqole Ad

ಬಿಗ್ ಬಾಸ್ ಮನೆಯಲ್ಲೇ ವರ್ತೂರು ಸಂತೋಷ್​ ಅರೆಸ್ಟ್!

ಖಾಸಗಿವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಬಂಧನವಾಗಿದ್ದು, ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ ಸ್ಪರ್ಧಿಯನ್ನು ಅರೆಸ್ಟ್ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್​ಗೆ ಬರುವ ಸಂದರ್ಭದಲ್ಲಿ ಕತ್ತಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇರುವ ಚೈನ್ ಹಾಕಿದ್ದರು. ಸದ್ಯ ಬಿಗ್ ಬಾಸ್ ಮನೆಯಿಂದ ಹೊರ ಕರೆತಂದು ಅರೆಸ್ಟ್ ಮಾಡಲಾಗಿದೆ. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ಅವರು ಬಂಧನಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ. ಆದರೆ, ವಾಹಿನಿ ಕಡೆಯಿಂದ ಯಾವುದೇ ಮಾಹಿತಿ ಹೊರ ಬಿದ್ದಿಲ್ಲ. ನಿನ್ನೆ (ರವಿವಾರ) ರಾತ್ರಿ 8 ಗಂಟೆ ವೇಳೆ ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ರನ್ನು ಹೊರ ಕರೆತಂದಿರುವ ರಾಮೋಹಳ್ಳಿ ಅರಣ್ಯಾಧಿಕಾರಿಗಳು ಸದ್ಯ ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ರಾಮೋಹಳ್ಳಿ ಅರಣ್ಯಾಧಿಕಾರಿಗಳಿಂದ ಈ ಕಾರ್ಯಾಚರಣೆ ನಡೆದಿದೆ. ಸುಮೊಟೋ ಕೇಸ್ ದಾಖಲಿಸಿ ಕಾರ್ಯಾಚರಣೆ ಮಾಡಲಾಗಿತ್ತು. ಇನ್ನಷ್ಟು ಮಾಹಿತಿ ಪಡೆಯಲು ಸಂತೋಷ್ ಅವರನ್ನು ಕೋರ್ಟ್​​ಗೆ ಹಾಜರುಪಡಿಸಲಾಗುತ್ತಿದೆ. ವೈಲ್ಡ್ ಲೈಫ್ ಪ್ರೊಟೆಕ್ಷನ್ ಆ್ಯಕ್ಟ್ ಅಡಿಯಲ್ಲಿ ಈ ಬಂಧನ ನಡೆದಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ