• 8 ಸೆಪ್ಟೆಂಬರ್ 2024

ಏಕದಿನ ವಿಶ್ವಕಪ್‌ನಲ್ಲಿ ದಾಖಲೆ ಬರೆದ ಆಸ್ಟ್ರೇಲಿಯಾ

 ಏಕದಿನ ವಿಶ್ವಕಪ್‌ನಲ್ಲಿ ದಾಖಲೆ ಬರೆದ ಆಸ್ಟ್ರೇಲಿಯಾ
Digiqole Ad

ಏಕದಿನ ವಿಶ್ವಕಪ್‌ನಲ್ಲಿ ದಾಖಲೆ ಬರೆದ ಆಸ್ಟ್ರೇಲಿಯಾ

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 24ನೇ ಪಂದ್ಯದಲ್ಲಿ ನೆದರ್​ಲೆಂಡ್ಸ್ ವಿರುದ್ಧ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ ತಂಡ ನೆದರ್ಲಾಂಡ್ ತಂಡವನ್ನು 309 ರನ್‌ಗಳಿಂದ ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದೆ. ಅಷ್ಟೇಅಲ್ಲ ಏಕದಿನ ವಿಶ್ವಕಪ್ ಇತಿಹಾಸದಲ್ಲೇ ಅತಿಹೆಚ್ಚು ರನ್‌ಗಳಿಂದ ಸೋಲಿಸಿದ ದಾಖಲೆಯನ್ನು ಕೂಡ ಆಸ್ಟ್ರೇಲಿಯಾ ತಂಡ ನಿರ್ಮಿಸಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾ ತಂಡದ ಪಾಲಿಗೂ ಇಲ್ಲಿವರೆಗೆ ಏಕದಿನ ಕ್ರಿಕೆಟ್‌ನಲ್ಲಿನ ಅತಿಹೆಚ್ಚು ರನ್‌ಗಳ ಗೆಲುವು ಇದಾಗಿದೆ. ಈ ಮ್ಯಾಚ್‌ನಲ್ಲಿ ಆಸೀಸ್ 399 ರನ್ ಗುರಿಯನ್ನು ನೀಡಿ ನೆದರ್ಲಾಂಡ್ ತಂಡವನ್ನು 90 ರನ್‌ಗೆ ಆಲೌಟ್ ಮಾಡಿದೆ. ಏಕದಿನ ಕ್ರಿಕೆಟ್​ನಲ್ಲಿ ಬೃಹತ್ ಅಂತರದ ಗೆಲುವು ದಾಖಲಿಸಿದ ವಿಶ್ವ ದಾಖಲೆ ಟೀಮ್ ಇಂಡಿಯಾ ಹೆಸರಿನಲ್ಲಿದೆ. 2023 ರಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 317 ರನ್​ಗಳ ಜಯ ಸಾಧಿಸಿ ಈ ವಿಶ್ವ ದಾಖಲೆ ನಿರ್ಮಿಸಿದೆ. ಇದೀಗ ನೆದರ್​ಲೆಂಡ್ಸ್​ ವಿರುದ್ಧ 309 ರನ್​ಗಳ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ