ಅಪಘಾತ ಪರಿಹಾರ ಯೋಜನೆ ಯಡಿ ನೋಂದಣಿ ಆರಂಭ
ಅಪಘಾತ ಪರಿಹಾರ ಯೋಜನೆ ಯಡಿ ನೋಂದಣಿ ಆರಂಭ
ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ ಜಾರಿಗೆ ತಂದಿದ್ದು, ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರರಿಗೆ ಕಾರ್ಮಿಕ ಇಲಾಖೆ ಮಾಹಿತಿ ನೀಡಿದ್ದು, ಈ ಯೋಜನೆಯಡಿ ಆಯಾ ಜಿಲ್ಲೆಗಳ ಜಿಲ್ಲಾ ಕಾರ್ಮಿಕಾಧಿಕಾರಿಗಳ ಕಚೇರಿಗೆ ತೆರಳಿ ನೋಂದಾಯಿಸಿಕೊಳ್ಳುವಂತೆ ತಿಳಿಸಿದೆ. ಇದೀಗ ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ. ಈ ಯೋಜನೆ ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಅನ್ವಯಿಸುತ್ತಿದ್ದು, ವಯೋಮಿತಿ 20 ರಿಂದ 70 ರೊಳಗಿರಬೇಕು. ಈ ಯೋಜನೆಯ ಸೌಲಭ್ಯಗಳು ಕರ್ತವ್ಯದಲ್ಲಿರುವಾಗ ಹಾಗೂ ಇಲ್ಲದಿರುವಾಗಲು ಸಹ ಅನ್ವಯಿಸುತ್ತದೆ. ಫಲಾನುಭವಿಗೆ ಗರಿಷ್ಠ 2 ಲಕ್ಷ ಹಾಗೂ ತಾತ್ಕಾಲಿಕ ದುರ್ಬಲತೆ ಹೊಂದಿದಾಗ ಅಪಘಾತಕ್ಕೋಳಗಾಗಿ ಅಸ್ಪತ್ರೆಯಲ್ಲಿ 15 ದಿನಗಳಿಗಿಂತ ಕಡಿಮೆ ಅವಧಿಗೆ ಒಳರೋಗಿಯಾಗಿ ಚಿಕಿತ್ಸೆ ಪಡೆದಲ್ಲಿ 50 ಸಾವಿರಗಳ ವರೆಗೆ ಅಥವಾ ಆಸ್ಪತ್ರೆ ವೆಚ್ಚ ಇವುಗಳಲ್ಲಿ ಯಾವುದು ಕಡಿಮೆಯೋ ಅದನ್ನು ಪಾವತಿಸಲಾಗುತ್ತದೆ. 15 ದಿನಗಳಿಗಿಂತ ಹೆಚ್ಚು ದಿನ ಒಳರೋಗಿಯಾಗಿ ಚಿಕಿತ್ಸೆ ಪಡೆದಿದ್ದಲ್ಲಿ 1.00 ಲಕ್ಷದವರೆಗೆ ಆಸ್ಪತ್ರೆ ವೆಚ್ಚ ಪಾವತಿಸಲಾಗುತ್ತದೆ.