ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್‌ಗೆ ಷರತ್ತುಬದ್ಧ ಜಾಮೀನು
ಹುಲಿ ಉಗುರು ಪ್ರಕರಣ: ವರ್ತೂರು ಸಂತೋಷ್‌ಗೆ ಷರತ್ತುಬದ್ಧ ಜಾಮೀನು
ಹುಲಿ ಉಗುರು ಧರಿಸಿದ್ದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿದ್ದ ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು ಮಂಜೂರಾಗಿದೆ. ಬೆಂಗಳೂರಿನ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ನೀಡಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಅಧಿಕಾರಿಗಳಿಗೆ ಜಾಮೀನು ಪ್ರತಿ ರವಾನೆ ಆಗಲಿದೆ. ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಲಿರುವ ಅಧಿಕಾರಿಗಳು, ಸಂತೋಷ್ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲಿದ್ದಾರೆ.
ಸಂತೋಷ್ ಅವರಿಗೆ 4 ಸಾವಿರ ರೂಪಾಯಿ ನಗದು ಭದ್ರತೆ ಹಾಗೂ ಶ್ಯೂರಿಟಿ ಒದಗಿಸುವಂತೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಸಂತೋಷ್ ಬಿಡುಗಡೆಯಾಗಲಿದ್ದಾರೆ. ಅವರನ್ನು ಕರೆದುಕೊಂಡು ಹೋಗಲು ಕಲರ್ಸ್ ಕನ್ನಡ ಚಾನೆಲ್ ವತಿಯಿಂದ ಕಾರೊಂದು ಜೈಲಿನ ಬಳಿ ನಿಂತಿದ್ದು, ಸಂತೋಷ್ ಮತ್ತೆ ಬಿಗ್ಬಾಸ್ ಮನೆ ತಲುಪುದು ಖಚಿತವಾಗಿದೆ.
ವರ್ತೂರ್ ಸಂತೋಷ್ ಪ್ರಕರಣ ಬೆನ್ನಲ್ಲೇ ರಾಜ್ಯಾದ್ಯಂತ ಹುಲಿ ಉಗುರು ಪ್ರಕರಣ ಸದ್ದು ಮಾಡಿತ್ತು. ಹಲವು ಸಿನಿಮಾ ನಟರು, ರಾಜಕೀಯ ನಾಯಕರು ಹುಲಿ ಉಗುರು ಧರಿಸಿರುವ ಫೋಟೋಗಳು ವೈರಲ್ ಆಗಿದ್ದು ಅವರ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿ ಲಾಕೆಟ್ ಗಳನ್ನು ವಶಕ್ಕೆ ಪಡೆದಿದ್ದಾರೆ.