ಕೇರಳ ಬಾಂಬ್ ಬ್ಲ್ಯಾಸ್ಟ್ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ
ಕೇರಳ ಬಾಂಬ್ ಬ್ಲ್ಯಾಸ್ಟ್ ಪ್ರಕರಣ: ಮೃತರ ಸಂಖ್ಯೆ 3ಕ್ಕೆ ಏರಿಕೆ
ಕೇರಳದ ಕೊಚ್ಚಿಯ ಕಲಮಸ್ಸೆರಿಯ ಕನ್ವೆನ್ಷನ್ ನಡೆದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. 40 ಕ್ಕೂ ಅಧಿಕ ಮಂದಿಗೆ ಗಾಯಗಳಾಗಿವೆ. ಸ್ಪೋಟದಲ್ಲಿ ಗಾಯಗೊಂಡಿದ್ದ 12 ವರ್ಷದ ಬಾಲಕನೊಬ್ಬ ಇಂದು ಮೃತಪಟ್ಟಿದ್ದಾನೆ ಎಂದು ಮೂಲಗಳು ತಿಳಿಸಿವೆ. ಟಿಫಿನ್ ಬಾಕ್ಸ್ ನಲ್ಲಿ ಸುಧಾರಿತ ಸ್ಪೋಟಕ (ಐಇಡಿ) ಇಟ್ಟು ಸ್ಪೋಟಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾರ್ಥನಾ ಸಭೆಯಲ್ಲಿ ಸುಮಾರು 2,500 ಜನ ಭಾಗವಹಿಸಿದ್ದರು ಎನ್ನಲಾಗಿದ್ದು, ನಿನ್ನೆ ಮಹಿಳೆ ಸೇರಿದಂತೆ ಇಬ್ಬರು ಸ್ಪೋಟದಿಂದ ಸಾವನ್ನಪ್ಪಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. 10 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಈ ನಡುವೆ ಡೊಮಿನಿಕ್ ಮಾರ್ಟಿನ್ ಎಂದು ಗುರುತಿಸಲಾದ ವ್ಯಕ್ತಿಯೊಬ್ಬ ಸರಣಿ ಸ್ಫೋಟದ ಹೊಣೆ ಹೊತ್ತಿಕೊಂಡಿದ್ದು, ತ್ರಿಶೂರ್‌ನ ಕೊಡಕರ ಪೊಲೀಸ್ ಠಾಣೆಗೆ ಶರಣಾಗಿದ್ದಾನೆ. ಮಾರ್ಟಿನ್ ನೀಡುತ್ತಿರುವ ಹೇಳಿಕೆಗ ಸತ್ಯಾಸತ್ಯತೆಗಳನ್ನು ಇನ್ನೂ ಪರಿಶೀಲಿಸಬೇಕಾಗಿದೆ. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.