• 8 ಸೆಪ್ಟೆಂಬರ್ 2024

15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!

 15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!
Digiqole Ad

15 ತಿಂಗಳ ಮಗು ಸಲುವಾಗಿ ಪ್ರಧಾನಿಗೆ ಮನವಿ ಮಾಡಿಕೊಂಡ ಸಿಎಂ!

ಒಂದು ವಿಶೇಷ ಕಾರಣಕ್ಕಾಗಿ ಪ್ರಧಾನಿ ಮೋದಿಯವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ. ರಾಜ್ಯದಲ್ಲಿನ 15 ತಿಂಗಳ ಮಗುವೊಂದರ ಚಿಕಿತ್ಸೆಗಾಗಿ ಔಷಧಕ್ಕೆ ಸಂಬಂಧಿಸಿದಂತೆ ಆಮದು ಸುಂಕ ವಿನಾಯಿತಿ ನೀಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಯವರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಕಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‍ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದ್ದು, ಅದರ ಬೆಲೆ 17.5 ಕೋಟಿ ರೂ.ಇದೆ. ಕೇಂದ್ರ ಸರಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಮಾಹಿತಿ ಹಂಚಿಕೊಂಡಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ