• 22 ನವೆಂಬರ್ 2024

ಕರ್ನಾಟಕದ ಜನತೆಗೆ ಉಚಿತ ವಿದ್ಯುತ್‌ ಯೂನಿಟ್‌ಗಳ ಮಿತಿ ಹೆಚ್ಚಿಸಿದ ಸರ್ಕಾರ!

Digiqole Ad

ಕರ್ನಾಟಕದ ಜನತೆಗೆ ಉಚಿತ ವಿದ್ಯುತ್‌ ಯೂನಿಟ್‌ಗಳ ಮಿತಿ ಹೆಚ್ಚಿಸಿದ ಸರ್ಕಾರ!

ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆ ವಿದ್ಯುತ್

ರಾಜ್ಯದಲ್ಲಿ ಭಾಗ್ಯಜ್ಯೋತಿ, ಕುಟೀರ ಜ್ಯೋತಿಗೆ 18 ಯೂನಿಟ್‍ಗಳ ಮಿತಿಯಿತ್ತು. ಅದನ್ನು 40 ಯೂನಿಟ್‍ಗಳಿಗೆ ನಮ್ಮ ಸರ್ಕಾರವೇ ಹಿಂದೆ ಹೆಚ್ಚಳ ಮಾಡಿತ್ತು. ಈಗ ಗೃಹಜ್ಯೋತಿ ಬಂದ ನಂತರ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿಗಳನ್ನು ಗೃಹಜ್ಯೋತಿ ಯೋಜನೆಯಡಿ ಸೇರಿಸಿ, 58 ಯೂನಿಟ್‍ವರಗೆ ಉಚಿತವಾಗಿ ವಿದ್ಯುತ್ ನೀಡಲು ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತಜ್ಯೋತಿ ಯೋಜನೆಗಳಡಿ 389.66 ಕೋಟಿ ರೂ.ಗಳು ಬಾಕಿ ಉಳಿದಿದ್ದವು. ಹೀಗಾಗಿ, ಗೃಹಜ್ಯೋತಿಯಡಿ ಉಚಿತ ಕೊಡುವುದು ಕಷ್ಟವಾಗುತ್ತಿತ್ತು. ಆದ್ದರಿಂದ ಬಾಕಿ ಮೊತ್ತವನ್ನು ಒಂದು ಬಾರಿಗೆ ಮನ್ನಾ ಮಾಡಲಾಗುತ್ತಿದೆ. ಇನ್ನು ಮುಂದೆ ಬಾಕಿ ಕೊಡಬೇಕಾದ ಅಗತ್ಯವಿಲ್ಲ ಎಂದು ಹೇಳಿದರು.

ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆ ವಿದ್ಯುತ್

ರಾಜ್ಯದಲ್ಲಿ ವಿದ್ಯುತ್ ಕೊರತೆಯಿದ್ದು, ಈ ಹಿನ್ನೆಲೆಯಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ ಏಳು ಗಂಟೆಗಳ ಕಾಲ ವಿದ್ಯುತ್ ನೀಡುವ ಘೋಷಣೆ ಮಾಡಿದ್ದೆವು. ರಾಯಚೂರು, ಕೊಪ್ಪಳ, ಬಳ್ಳಾರಿ, ಯಾದಗಿರಿ ರೈತರು ಭೇಟಿ ಮಾಡಿ ಭತ್ತ ಬೆಳೆಯುವುದರಿಂದ 5 ಗಂಟೆಗಳ ಕಾಲ ವಿದ್ಯುತ್ ನೀಡುವುದು ಸಾಕಾಗುವುದಿಲ್ಲ, 7 ಗಂಟೆಗಳ ಕಾಲ ನೀಡಬೇಕೆಂದು ಎಂದು ಮನವಿ ಮಾಡಿದರು. ಕಬ್ಬು ಹಾಗೂ ಭತ್ತ ಕಟಾವಿಗೆ ಬಂದಿರುವುದರಿಂದ ಈ ಭಾಗದಲ್ಲಿ 7 ಗಂಟೆಗಳ ಕಾಲ ವಿದ್ಯುತ್ ನೀಡುವುದು ಎಂದು ಸೂಚನೆ ನೀಡಲಾಗಿದೆ. ಇಂದಿನಿಂದ 7 ತಾಸು ವಿದ್ಯುತನ್ನು ಪಂಪ್‍ಸೆಟ್‍ಗಳಿಗೆ ನೀಡುತ್ತಿದ್ದೇವೆ. ಕೈಗಾರಿಕೆಗಳಿಗೆ, ಗೃಹಬಳಕೆಗೆ ವಿದ್ಯುತ್ ಕಡಿತ ಮಾಡಲಾಗುತ್ತಿಲ್ಲ. ಪಂಪ್‍ಸೆಟ್‍ಗಳಿಗೆ ನೀಡುವ ವಿದ್ಯುತ್ ಸಹಾಯಧನವನ್ನು ಸರ್ಕಾರವೇ ನೀಡಿದೆ. 13100 ಕೋಟಿ ರೂ.ಗಳನ್ನು ಬಜೆಟ್‍ನಲ್ಲಿ ಒದಗಿಸಲಾಗಿದೆ ಎಂದರು.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ