• 7 ಸೆಪ್ಟೆಂಬರ್ 2024

ಭಗವದ್ಗೀತೆ, ಅಧ್ಯಾಯ ಎರಡು, ಶ್ಲೋಕ 50

 ಭಗವದ್ಗೀತೆ, ಅಧ್ಯಾಯ ಎರಡು, ಶ್ಲೋಕ 50
Digiqole Ad

ಶ್ಲೋಕ – 50

ಬುದ್ಧಿಯುಕ್ತೋ ಜಹಾತೀಹ ಉಭೇ ಸುಕೃತದುಷ್ಕೃತೇ ।

ತಸ್ಮಾದ್ ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್ ॥೫೦॥

ಬುದ್ಧಿಯುಕ್ತಃ ಜಹಾತಿ ಇಹ ಉಭೇ ಸುಕೃತದುಷ್ಕೃತೇ ತಸ್ಮಾತ್ ಯೋಗಾಯ ಯುಜ್ಯಸ್ವ ಯೋಗಃ ಕರ್ಮಸು ಕೌಶಲಮ್- ಭಗವಂತನನ್ನರಿತವನು ಬೇಡವಾದ ಪುಣ್ಯಪಾಪಗಳೆರಡನ್ನು ಇಲ್ಲೆ ತೊರೆಯುತ್ತಾನೆ. ಆದ್ದರಿಂದ ಅರಿವಿನ ‘ಯೋಗ’ಕ್ಕೆ ತೊಡಗು. ‘ಯೋಗ’ವೆಂದರೆ ಇದೆ: ತಿಳಿದು ಮಾಡುವ ಜಾಣತನ.

ತಿಳುವಳಿಕೆಯಿಂದ ಕರ್ಮ ಮಾಡಿದರೆ ತನ್ನ ಎಲ್ಲಾ ಪಾಪಗಳನ್ನು ಹಾಗು ಬೇಡವಾದ ಪುಣ್ಯವನ್ನು ತೊರೆದು ಭಗವಂತನನ್ನು ಸೇರುತ್ತಾನೆ. ಇಲ್ಲಿ ಬೇಡವಾದ ಪುಣ್ಯ ಅಂದರೆ: ಉದಾಹರಣೆಗೆ ಒಬ್ಬ ಮಹಾತ್ಮ ತನ್ನ ಜ್ಞಾನ ಕರ್ಮಗಳಿಂದ ಮೋಕ್ಷವನ್ನು ಪಡೆಯುತ್ತಾನೆ. ಹೀಗೆ ಈ ಮಾರ್ಗದಲ್ಲಿರುವಾಗ ಆತ ಇತರ ಪುಣ್ಯವನ್ನೂ ಗಳಿಸುತ್ತಾನೆ. ಒಂದು ವೇಳೆ ಆತ ಚಕ್ರವರ್ತಿಯಾಗಿ ಮೆರೆಯುವ ಪುಣ್ಯವನ್ನು ಪಡೆದಿದ್ದರೆ ಅದು ಆತನಿಗೆ ಬೇಡವಾದ ಪುಣ್ಯ. ಏಕೆಂದರೆ ಮೋಕ್ಷದ ಮುಂದೆ ಈ ಪುಣ್ಯದ ಅವಶ್ಯಕತೆ ಆತನಿಗಿಲ್ಲ. ಆತ ಈ ಪುಣ್ಯವನ್ನು ಇಲ್ಲೇ ತೊರೆಯುತ್ತಾನೆ. ಇದನ್ನು ಇಲ್ಲಿ ಬೇಡವಾದ ಪುಣ್ಯ ಎಂದಿರುವುದು. ಯಾರು ಹೀಗೆ ಭಗವತ್ಪ್ರಜ್ಞೆಯಲ್ಲಿ ಬದುಕುತ್ತಾರೋ ಅವರು ಮಾಡಿದ ಕರ್ಮ ಅವರ ಪಾಪ ಪುಣ್ಯದ ಬಂಧನಕ್ಕೆ ಕಾರಣವಾಗುವುದಿಲ್ಲ. ಆದ್ದರಿಂದ ಜ್ಞಾನಯೋಗದಲ್ಲಿ ನಿಂತು ಆ ಅರಿವಿನಿಂದ ಕರ್ಮವನ್ನು ಮಾಡುವುದು ಜಾಣತನ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ