ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ
ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹಾಸನದಲ್ಲಿ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಪಕ್ಷದಿಂದ ಗರಿಷ್ಠ ಲಾಭ ಪಡೆದಿದ್ದೇನೆ, ಹೆಚ್ಚಿನದಕ್ಕೆ ಆಸೆ ಪಡುವುದಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದ ಸಿಎಂ, ಕೇಂದ್ರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದೇನೆ. 10 ವರ್ಷ ಶಾಸಕ, 20 ವರ್ಷ ಸಂಸದನಾಗಿ ಕಾರ್ಯ ನಿರ್ವಹಿಸಿದ್ದೇನೆ. ಒಂದು ವರ್ಷ ಮುಖ್ಯಮಂತ್ರಿಯಾಗಿ, 4 ವರ್ಷ ರಾಜ್ಯ ಪಕ್ಷದ ಅಧ್ಯಕ್ಷನಾಗಿ ಕಾರ್ಯನಿರ್ವಹಿಸಿದ್ದೇನೆ ಎಂದು ಹೇಳಿದ್ದಾರೆ. ಚುನಾವಣಾ ರಾಜಕೀಯದಲ್ಲಿ ಮುಂದುವರಿಯದಿರಲು ನಿರ್ಧರಿಸಿದ್ದೇನೆ.
ಮೂವತ್ತು ವರ್ಷ ನನ್ನ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಯಡಿಯೂರಪ್ಪ ಬಿಟ್ಟರೆ ನಮ್ಮ ಪಕ್ಷದಲ್ಲಿ ನಾನೇ ನಂಬರ್ ಒನ್ ಫಲಾನುಭವಿ. 10 ವರ್ಷ ಶಾಸಕ, 20 ವರ್ಷ ಸಂಸದ, 1 ವರ್ಷ ಮುಖ್ಯಮಂತ್ರಿ, ಒಂದೂವರೆ ವರ್ಷ ವಿರೋಧ ಪಕ್ಷದ ನಾಯಕ, ಐದು ವರ್ಷ ವಿಧಾನಸಭೆಯಲ್ಲಿ ವಿರೋಧ ಪಕ್ಷದ ಉಪನಾಯಕ, ನಾಲ್ಕೂವರೆ ವರ್ಷ ಪಕ್ಷದ ರಾಜ್ಯಾಧ್ಯಕ್ಷ, ಕೇಂದ್ರದಲ್ಲಿ ಏಳು ವರ್ಷ ನರೇಂದ್ರ ಮೋದಿ ಜೊತೆ ಕ್ಯಾಬಿನೆಟ್ ಮಂತ್ರಿಯಾಗಿದ್ದಾನೆ. ಇಷ್ಟು ಸಿಕ್ಕಿ ಕೂಡ ಸಂತೋಷ ಪಡದ ರಾಜಕಾರಣಿ, ಅವನು ರಾಜಕಾರಣಿ ಅಲ್ಲ. ಅವನನ್ನು ಸ್ವಾರ್ಥಿ ಎಂದು ತಿಳಿದುಕೊಳ್ಳುತ್ತೇನೆ’ ಎನ್ನುವ ಮೂಲಕ ಸಕ್ರಿಯ ರಾಜಕಾರಣದಿಂದ ದೂರವುಳಿಯುವ ಬಗ್ಗೆ ಡಿ.ವಿ ಸದಾನಂದ ಗೌಡ ಮಾತನಾಡಿದ್ದಾರೆ.