ಬೆಳಂದೂರು: ಭಾರಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ
ಬೆಳಂದೂರು: ಭಾರಿ ಮಳೆಗೆ ಮನೆ ಮೇಲೆ ಮರ ಬಿದ್ದು ಹಾನಿ
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳಂದೂರು ಗ್ರಾಮದ ಮಾದೋಡಿ ಕರಿಯಪ್ಪ ರವರ ಮನೆ ಮೇಲೆ ಮರ ಬಿದ್ದು ಹಾನಿ ಉಂಟಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪಾರ್ವತಿ ಮರಕ್ಕಡ, ಉಪಾಧ್ಯಕ್ಷರಾದ ಜಯಂತ ಅಬೀರ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ನಾರಾಯಣ, ಗ್ರಾಮ ಕರಣಿಕರಾದ ಪುಷ್ಪರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.