• 20 ಮಾರ್ಚ್ 2025

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

 ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ
Digiqole Ad

ಬಿಜೆಪಿ ನೂತನ ರಾಜ್ಯಾಧ್ಯಕ್ಷರಾಗಿ ಬಿವೈ ವಿಜಯೇಂದ್ರ ಆಯ್ಕೆ

ಶಿಕಾರಿಪುರ ಕ್ಷೇತ್ರದ ಶಾಸಕ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರನ್ನು ಕರ್ನಾಟಕ ರಾಜ್ಯ ಬಿಜೆಪಿ ಘಟಕದ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನೂತನ ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡುವ ಮೂಲಕ ಬಿಜೆಪಿ ಹೈಕಮಾಂಡ್‌ ಬಿ ವೈ ವಿಜಯೇಂದ್ರ ಅವರಿಗೆ ದೀಪಾವಳಿ ಗಿಫ್ಟ್‌ ನೀಡಿದೆ. ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಈ ಕ್ಷಣದಿಂದಲೇ ಜಾರಿಗೆ ಬರುವಂತೆ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಪ್ರಕಟಿಸಿದ್ದಾರೆ. ಇದರೊಂದಿಗೆ ಹಲವು ತಿಂಗಳುಗಳಿಂದ ನಡೆಯುತ್ತಿದ್ದ ರಾಜ್ಯಾಧ್ಯಕ್ಷ ಆಯ್ಕೆ ಚರ್ಚೆಗೆ ತೆರೆ ಬಿದ್ದಂತಾಗಿದೆ .ಈ ಕೂಡಲೇ ಜಾರಿಯಾಗುವಂತೆ ರಾಜ್ಯಾದ್ಯಕ್ಷರನ್ನಾಗಿ ಬಿ.ವೈ. ವಿಜಯೇಂದ್ರ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ