ರಾಜಧಾನಿಯಲ್ಲಿ ಹೆಚ್ಚುತ್ತಿದೆ ವೈರಲ್ ಫೀವರ್
ರಾಜಧಾನಿಯಲ್ಲಿ ಹೆಚ್ಚುತ್ತಿದೆ ವೈರಲ್ ಫೀವರ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವೈರಲ್ ಫೀವರ್ :
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನ ವಾತಾವರಣದಲ್ಲಿ ಸಾಕಷ್ಟು ಬದಲಾವಣೆಗೊಳ್ಳುತ್ತಿದ್ದು, ಬೆಳಗ್ಗೆ ಬಿಸಿಲಿದ್ರೆ, ಮಧ್ಯಾಹ್ನ ಮಳೆ, ಸಂಜೆ ಚಳಿ ವಾತಾವರಣ ಕಂಡು ಬರುತ್ತಿದೆ. ಈ ಹವಾಮಾನ ವೈಪರಿತ್ಯದಿಂದಾಗಿ ಮಕ್ಕಳು ಸೇರಿ ದೊಡ್ಡವರಲ್ಲೂ ವೈರಲ್ ಜ್ವರ ಹೆಚ್ಚಾಗುತ್ತಿದೆ. ಇನ್ನು ಅಸ್ತಮಾ ಸಮಸ್ಯೆ ಇರುವವರಲ್ಲಿ ಹೆಚ್ಚಾಗಿ ಉಸಿರಾಟ ತೊಂದರೆ ಕಂಡು ಬರುತ್ತಿದೆ. ಹೀಗಾಗಿ ನಗರದ ಕೆ ಪಿ ಜನರಲ್, ವಿಕ್ಟೊರಿಯ ಆಸ್ಪತ್ರೆ, ಇನ್ನೂ ಹಲವು ಆಸ್ಪತ್ರೆಗಳಲ್ಲಿ ಅಡ್ಮಿಟ್ ಆಗುವವರ ಸಂಖ್ಯೆ ಹೆಚ್ಚಾಗಿದೆ.ಕೆಲವಾರು ದಿನಗಳಿಂದ ಹವಾಮಾನ ದಲ್ಲಿ ಈ ರೀತಿ ಬದಲಾವಣೆ ಕಂಡುಬರುತ್ತಿದ್ದು, ಜನರ ಮೇಲೆ ಪರಿಣಾಮ ಬೀರುತ್ತಿದೆ. ಮುಖ್ಯವಾಗಿ ಮಕ್ಕಳಲ್ಲಿ ಕೆಮ್ಮು, ಶೀತ, ಜ್ವರ ಲಕ್ಷಣಗಳು ಕಂಡು ಬರುತ್ತಿದೆ. ಒಂದು ವಾರದಿಂದ ಆಸ್ಪತ್ರೆಯಲ್ಲಿ ದಾಖಲಾಗುವವರ ಸಂಖ್ಯೆ 20%ರಷ್ಟು ಜಾಸ್ತಿ ಆಗಿದೆ.
ಹೀಗಾಗಿ ಜನರು ಮುಂಜಾಗ್ರತೆ ವಹಿಸುವಂತೆ ವೈದ್ಯರು ಸೂಚಿಸಿದ್ದಾರೆ.