ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ :
- ಉದ್ಯೋಗ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ :
ಈಗಾಗಲೇ ಹಲವಾರು ಸರಕಾರಿ ವಿಭಾಗಗಳಲ್ಲಿ ಹುದ್ದೆಗಳು ಖಾಲಿ ಇದ್ದು, ಹುದ್ದೆ ಭರ್ತಿ ಮಾಡಲು ರಾಜ್ಯ ಸರಕಾರ ಆದೇಶ ಹೊರಡಿಸುತ್ತಿದೆ. ಅಲ್ಲದೇ ಕೆಲವೊಂದು ಸರಕಾರಿ ಕಚೇರಿಗಳ ವಿಭಾಗದಲ್ಲಿ ಸಿಬ್ಬಂದಿಗಳ ಕೊರತೆ ಕಂಡು ಬಂದಿದ್ದು, ಸಮಸ್ಯೆ ಪರಿಹಾರಕ್ಕಾಗಿ ಸಾರ್ವಜನಿಕರು ಸರಕಾರಕ್ಕೆ ಬೇಡಿಕೆ ಇಟ್ಟಿರುವ ವಿಷಯವೂ ಸುದ್ದಿಯಾಗಿತ್ತು. ಅದರ ಬೆನ್ನಲ್ಲೇ ಇದೀಗ ರಾಜ್ಯದಲ್ಲಿ ಖಾಲಿ ಇರುವ ಪಿ ಡಿ ಒ, ಕಾರ್ಯದರ್ಶಿ,ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಸೇರಿ ಒಟ್ಟು 755 ವಿವಿಧ ಹುದ್ದೆಗಳ ಭರ್ತಿಗೆ ಕೆ ಪಿ ಎಸ್ ಸಿ ಗೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಮಾಹಿತಿ ಸಿಕ್ಕಿದ್ದು, ನವಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರ ಅಧಿಸೂಚನೆ ಹೊರಬೀಳಲಿದೆ. ಹುದ್ದೆ ಖಾಲಿ ಇರುವುದರಿಂದ ಹಾಲಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡವೂ ಹೆಚ್ಚಾಗಿದೆ. ಹುದ್ದೆ ಭರ್ತಿ ಆದರೆ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಒಟ್ಟಾಗಿ ಉದ್ಯೋಗಿ ಆಕಾಂಕ್ಷಿಗಳಿಗೆ ಉದ್ಯೋಗ ಪಡೆಯಲು ಒಳ್ಳೆಯ ಅವಕಾಶ ಇದಾಗಿದ್ದು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ.