• 15 ಫೆಬ್ರವರಿ 2025

ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ `ಸೂರ್ಯ ಕಿರಣ್ ಏರೋಬ್ಯಾಟಿಕ್’ ತಂಡದಿಂದ ಏರ್ ಶೋ

 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ `ಸೂರ್ಯ ಕಿರಣ್ ಏರೋಬ್ಯಾಟಿಕ್’ ತಂಡದಿಂದ ಏರ್ ಶೋ
Digiqole Ad

ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ `ಸೂರ್ಯ ಕಿರಣ್ ಏರೋಬ್ಯಾಟಿಕ್’ ತಂಡದಿಂದ ಏರ್ ಶೋ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ ಪಂದ್ಯಕ್ಕೆ ಇನ್ನೆರಡು ದಿನಗಳು ಮಾತ್ರ ಬಾಕಿ ಉಳಿದಿದ್ದು, ಟೀಂ ಇಂಡಿಯಾ ಹಾಗೂ ಆಸ್ಟ್ರೇಲಿಯಾ ನಡುವೆ ಫೈನಲ್ ಪಂದ್ಯ ನಡೆಯಲಿದೆ.

ಫೈನಲ್ ಪಂದ್ಯದ ಮೊದಲ 10 ನಿಮಿಷಗಳ ಕಾಲ ಸೂರ್ಯ ಕಿರಣ್ ಏರೋಬ್ಯಾಟಿಕ್ ತಂಡವು ಪ್ರೇಕ್ಷಕರನ್ನು ಮೋಡಿ ಮಾಡಲಿದೆ ಎಂದು ರಕ್ಷಣಾ ಇಲಾಖೆಯ ಗುಜರಾತ್ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ. ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ 12 ವರ್ಷಗಳ ನಂತರ ವಿಶ್ವಕಪ್ ಫೈನಲ್ ತಲುಪುವಲ್ಲಿ ಯಶಸ್ವಿಯಾಗಿದೆ. ಈ ಬಾರಿ ವಿಶ್ವಕಪ್ ಭಾರತ ಗೆಲ್ಲಲಿದೆ ಎಂದು ಅಭಿಮಾನಿಗಳು ಆಶಿಸಿದ್ದಾರೆ. ಬಿಸಿಸಿಐ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸಾಧ್ಯತೆಗಳು ಇದ್ದು, ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ಧತೆಗಳ ವಿಡಿಯೋಗಳು ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಫೈನಲ್ ಪಂದ್ಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕೂಡಾ ಮುಖ್ಯ ಅತಿಥಿಯಾಗಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿದೆ.

 

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ