ಪರೀಕ್ಷೆ ಬರೆಯಲು ಗರ್ಭಿಣಿ ವಕೀಲೆಗೆ ವಿಶೇಷ ಅವಕಾಶ ನೀಡಿದ ಹೈಕೋರ್ಟ್
ಪರೀಕ್ಷೆ ಬರೆಯಲು ಗರ್ಭಿಣಿ ವಕೀಲೆಗೆ ವಿಶೇಷ ಅವಕಾಶ ನೀಡಿದ ಹೈಕೋರ್ಟ್
ಇಂದು ಮತ್ತು ನಾಳೆ ನ್ಯಾಯಾಧೀಶರ ಹುದ್ದೆಗೆ ನಡೆಯಲಿರುವ ಲಿಖಿತ ಪರೀಕ್ಷೆಯನ್ನು ಎಂಟೂವರೆ ತಿಂಗಳ ಗರ್ಭಿಣಿ ವಕೀಲೆ ನೇತ್ರಾವತಿಯವರಿಗೆ ದ.ಕ ಜಿಲ್ಲಾ ನ್ಯಾಯಾಲಯದಲ್ಲಿ ಬರೆಯಲು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರು ಅನುಮತಿಸಿದ್ದಾರೆ. ಈ ರೀತಿಯ ಅವಕಾಶ ನೀಡಿರುವುದು ಇದೇ ಮೊದಲ ಬಾರಿಯಾಗಿದ್ದು. ಪರೀಕ್ಷೆ ನಡೆಸಲು ಬೆಂಗಳೂರಿನ ಮಹಿಳಾ ನ್ಯಾಯಾಂಗ ಅಧಿಕಾರಿಯನ್ನು ವೀಕ್ಷಕರನ್ನಾಗಿ ವಿಶೇಷವಾಗಿ ಹೈಕೋರ್ಟ್ ನಿಯೋಜಿಸಿದೆ. ಈ ರೀತಿಯ ಅವಕಾಶ ನೀಡಿರುವುದು ಇದೇ ಮೊದಲ ಬಾರಿಯಾಗಿದ್ದು, ನ್ಯಾಯಾಲಯದ ಈ ನಿರ್ಧಾರಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ಪೂರ್ವಭಾವಿ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರುವ ನೇತ್ರಾವತಿಯವರ ಆರೋಗ್ಯ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಪ್ರಯಾಣ ಮಾಡುವುದು ಅಸಾಧ್ಯವಾಗಿರುವುದರಿಂದ ಈ ಅವಕಾಶ ನೀಡಲಾಗಿದೆ. ಇದಕ್ಕೆ ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ವಕೀಲೆ ನೇತ್ರಾವತಿ ಅವರ ಮನವಿಯನ್ನು ಪುರಸ್ಕರಿಸಿರುವ ಹೈಕೋರ್ಟ್, ದಕ್ಷಿಣ ಕನ್ನಡದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಅಭ್ಯರ್ಥಿ ಪರೀಕ್ಷೆಯನ್ನು ಬರೆಯಬಹುದು ಎಂದಿದೆ. ಕರ್ನಾಟಕ ಹೈಕೋರ್ಟ್ ಇತಿಹಾಸದಲ್ಲಿ ಹೊಂದಿರುವ ಉನ್ನತ ಗೌರವವನ್ನು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಅವರ ಈ ನಡೆ ಎತ್ತಿಹಿಡಿದಿದೆ ಎಂದು ಕರ್ನಾಟಕ ಹೈಕೋರ್ಟ್‌ನ ರಿಜಿಸ್ಟ್ರಾರ್ ಜನರಲ್ ಕೆಎಸ್ ಭರತ್ ಕುಮಾರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.