• 8 ಸೆಪ್ಟೆಂಬರ್ 2024

ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ LED ಪರದೆ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

 ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ LED ಪರದೆ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ
Digiqole Ad

ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಿಸಲು ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ LED ಪರದೆ ವ್ಯವಸ್ಥೆ ಕಲ್ಪಿಸಿದ ರಾಜ್ಯ ಸರ್ಕಾರ

ಇಂದು ಅಹಮದಾಬಾದ್‍ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆಯನ್ನು ರಾಜ್ಯ ಸರ್ಕಾರದಿಂದ ಕಲ್ಪಿಸಲಾಗಿದೆ. ಈ ಸಂಬಂಧ ಸರ್ಕಾರದಿಂದ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ನಾಡಿನ ಸಮಸ್ತ ಕ್ರಿಕೆಟ್ ಪ್ರಿಯರಿಗೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ನಾಳಿನ ವಿಶ್ವಕಪ್ ಪಂದ್ಯಾಕೂಟದ ಫೈನಲ್ ಪಂದ್ಯವನ್ನು ರಾಜ್ಯದ ಎಲ್ಲಾ ಜಿಲ್ಲಾ ಕ್ರೀಡಾಂಗಣಗಳಲ್ಲಿ ದೊಡ್ಡ ಪರದೆಯಲ್ಲಿ ನೇರಪ್ರಸಾರದ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದೆ. ಕ್ರಿಕೆಟ್ ಅಭಿಮಾನಿಗಳು ಈ ಅವಕಾಶವನ್ನು ಬಳಸಿಕೊಂಡು ಫೈನಲ್ ಪಂದ್ಯದ ರೋಚಕ ಕ್ಷಣಗಳನ್ನು ಕಣ್ತುಂಬಿಕೊಳ್ಳಬೇಕೆಂದು ವಿನಂತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಪಂದ್ಯ ನಡೆಯಲಿದ್ದು, ಪಂದ್ಯಕ್ಕೂ ಮುನ್ನ ಸಮಾರೋಪ ಸಮಾರಂಭವನ್ನು ಆಯೋಜಿಸಲಾಗಿದೆ. ಇದಲ್ಲದೆ ಏರ್‍ಶೋ, ಲೇಸರ್ ಶೋ, ಸಂಗೀತ, ನೃತ್ಯ ವೈಭವ ವಿಶ್ವಕಪ್ ಫೈನಲ್ ಮ್ಯಾಚ್‍ನ ಮನೋರಂಜನೆಯನ್ನು ಹೆಚ್ಚಿಸಲಿದೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ