• 8 ಸೆಪ್ಟೆಂಬರ್ 2024

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ

 ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ
Digiqole Ad

ಐತಿಹಾಸಿಕ ಬೆಂಗಳೂರು ಕಂಬಳಕ್ಕೆ ಕ್ಷಣಗಣನೆ

ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆಯಾದ ಕಂಬಳಕ್ಕೆ ಇನ್ನೇನು ಕೆಲವೇ ಹೊತ್ತಿನಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಎರಡು ದಿನದ ಈ ಬೃಹತ್‌ ಕ್ರೀಡೋತ್ಸವದಲ್ಲಿ ಅಶ್ವಿನಿ ಪುನೀತ್‌ ರಾಜ್‌ ಕುಮಾರ್‌ ಅವರು ಕಂಬಳ ಕರೆ ಉದ್ಘಾಟಿಸಲಿದ್ದಾರೆ. ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಬೆಂಗಳೂರು ಸಾಂಸ್ಕೃತಿಕ ಕ್ರೀಡೆಗೆ ಸಾಕ್ಷಿಯಾಗುತ್ತಿದೆ. ನಮ್ಮ ಕಂಬಳ ಘೋಷವಾಕ್ಯದೊಂದಿಗೆ ಸಿಲಿಕಾನ್‌ ಸಿಟಿಯಲ್ಲಿ ಕಂಬಳ ನಡೆಯುತ್ತಿದ್ದು, ಕಂಬಳಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಕರಾವಳಿಯ ಜಾನಪದ ಕ್ರೀಡೆಯನ್ನು ಕಣ್ತುಂಬಿ ಕೊಳ್ಳಲು ಕ್ಷಣಗಣನೆ ಆರಂಭವಾಗಿದ್ದು, ಸಾರ್ವಜನಿಕರಿಗೆ ಪ್ರವೇಶ ಉಚಿತವಾಗಿರಲಿದೆ. ಕಂಬಳಕ್ಕಾಗಿ ಸಿಲಿಕಾನ್ ಸಿಟಿಗೆ ಸುಮಾರು 200 ಜೋಡಿಯ ಕೋಣಗಳು ಎಂಟ್ರಿ ಕೊಟ್ಟಿದ್ದು, ಬಂದಂತಹ ಕೋಣಗಳು ಇರಲು ಸೂಕ್ತವಾದ ಜಾಗ, ಮೇವು, ಕುಡಿಯುವ ನೀರಿನ ವ್ಯವಸ್ಥೆಯನ್ನ ಸಹ ಮಾಡಲಾಗಿದೆ.‌ ಮಂಗಳೂರಿನಿಂದ ಬಂದು ಬೆಂಗಳೂರಿನ ಕಂಬಳ ಭಾಗವಹಿಸುತ್ತಿರುವ ಬಗ್ಗೆ ಕಂಬಳ ಕ್ರೀಡಾಪಟುಗಳು ಹಾಗೂ ಕೋಣಗಳ ಮಾಲೀಕರು ಸಹ ಸಂತೋಷ ವ್ಯಕ್ತಪಡಿಸಿದ್ದಾರೆ.

Digiqole Ad

ದಿಶಾ ಕೆ.ಎಸ್

https://goldfactorynews.com

ಈ ಸುದ್ದಿಗಳನ್ನೂ ಓದಿ